ಗಣಪತಿ ಜಾತ್ರೆಗೆ ಪ್ರವೇಶದ್ವಾರ ಲೋಕಾರ್ಪಣೆ

ಸಾಗರ: ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರವೇಶದ್ವಾರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಗಣಪತಿ ಜಾತ್ರೆಯೊಳಗೆ ಲೋಕಾರ್ಪಣೆಗೊಳಿಸಲು ಉದ್ದೇಶಿಸಲಾಗಿದೆ ಎಂದು ಶ್ರೀ ಮಹಾಗಣಪತಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಟಿ.ವಿ.ಪಾಂಡುರಂಗ ಹೇಳಿದರು.
Gopooje
ಸಾಗರದ ಮಹಾಗಣಪತಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಗೋಪೂಜೆಯಲ್ಲಿ ಟಿ.ವಿ.ಪಾಂಡುರಂಗ, ನವೀನ್ ಜೋಯ್ಸ, ಐ.ವಿ.ಹೆಗಡೆ, ಮ.ಸ.ನಂಜುಂಡಸ್ವಾಮಿ ಇತರರಿದ್ದರು.
Published on: 

ಸಾಗರ: ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರವೇಶದ್ವಾರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಗಣಪತಿ ಜಾತ್ರೆಯೊಳಗೆ ಲೋಕಾರ್ಪಣೆಗೊಳಿಸಲು ಉದ್ದೇಶಿಸಲಾಗಿದೆ ಎಂದು ಶ್ರೀ ಮಹಾಗಣಪತಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಟಿ.ವಿ.ಪಾಂಡುರಂಗ ಹೇಳಿದರು.

ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದೀಪಾವಳಿ ಅಂಗವಾಗಿ ಹಮ್ಮಿಕೊಂಡಿದ್ದ ಗೋಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ಗಣಪತಿ ದೇವಸ್ಥಾನ ಪ್ರವೇಶದ್ವಾರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 65 ಲಕ್ಷ ರೂ. ಬಂದಿದ್ದು, ರಾಮನಗರದ ಶಿಲ್ಪಿಗಳು ಪ್ರವೇಶದ್ವಾರ ನಿರ್ಮಾಣ ಕಾರ್ಯ ಮಾಡುತ್ತಿದ್ದಾರೆ. ದೇವಸ್ಥಾನ ಅಭಿವೃದ್ಧಿಗೆ 3 ಕೋಟಿ ರೂ. ಹಣದ ಅಗತ್ಯವಿದ್ದು, ಸರ್ಕಾರದಿಂದ ಪೂರ್ಣ ಹಣ ಬರುವುದು ವಿಳಂಬವಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ದೇವಸ್ಥಾನ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.

ಅರ್ಚಕ ನವೀನ್ ಜೋಯ್ಸ ಮಾತನಾಡಿ, ಮಹಾಗಣಪತಿ ದೇವಸ್ಥಾನದಲ್ಲಿ ಗೋಪೂಜೆಯನ್ನು ವಿಶೇಷವಾಗಿ ನಡೆಸುವ ಮೂಲಕ ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಗಿದೆ ಎಂದರು. ಐ.ವಿ.ಹೆಗಡೆ, ಮ.ಸ.ನಂಜುಂಡಸ್ವಾಮಿ, ಚೂಡಾಮಣಿ ರಾಮಚಂದ್ರ ಇತರರಿದ್ದರು.