ಭದ್ರಾವತಿ: ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್.ತಿಮ್ಮಪ್ಪ ಹೇಳಿದರು.
ಹಳ್ಳಿಕೆರೆ ಗ್ರಾಮದಲ್ಲಿ ಆಯೋಜಿಸಿದ್ದ ಜಾನಪದ ಕಲರವ ಕಾರ್ಯಕ್ರಮದಲ್ಲಿ ಮಾತನಾಡಿ, ಆಧುನಿಕ ಕಾಲದಲ್ಲಿ ಕಲೆಗಳ ಪ್ರದರ್ಶನ ಕಡಿಮೆಯಾಗಿದ್ದು, ವಿದ್ಯಾರ್ಥಿಗಳಿಗೆ ಜಾನಪದ ಕಲೆಗಳ ಪರಿಚಯಿಸುವುದು ಅವಶ್ಯ ಎಂದು ತಿಳಿಸಿದರು.
ಸಂತ ಡೋಮಿನಿಕ್ ಶಾಲೆ ಮುಖ್ಯಶಿಕ್ಷಕಿ ಸಿಸ್ಟರ್ ಜೆನ್ಫಿ ಮಾತನಾಡಿ, ಜಾನಪದ ಕಾರ್ಯಕ್ರಮ ಶಾಲೆಯಲ್ಲಿ ಮೊದಲ ಬಾರಿ ನಡೆಯುತ್ತಿದ್ದು ಇನ್ನಷ್ಟು ಕಾರ್ಯಕ್ರಮ ಆಯೋಜನೆ ಆಗಬೇಕು ಎಂದರು.
ಎಮ್ಮೆಹಟ್ಟಿಯ ರಘುಕುಮಾರ್ ಮತ್ತು ತಂಡದವರು ಡೊಳ್ಳು ಕುಣಿತ ಪ್ರದರ್ಶನ ನೀಡಿದರು. ಹಿರಿಯ ರಂಗ ಕಲಾವಿದ ಕೆ.ಎಸ್.ರವಿಕುಮಾರ್, ಬಿ.ಕಮಲಾಕರ, ಅಂಬೇಡ್ಕರ್ ಜಾನಪದ ಕಲಾಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್ ಇತರರಿದ್ದರು.