ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ

ಶಿಕಾರಿಪುರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆ ಸಮಾರೋಪದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬಿ.ವೈ.ವಿಜಯೇಂದ್ರ, ಸಿ.ಬಿ.ವೆಂಕಟೇಶ್, ಚಂದ್ರಪ್ಪ ಇತರರಿದ್ದರು.
ಶಿಕಾರಿಪುರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆ ಸಮಾರೋಪದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬಿ.ವೈ.ವಿಜಯೇಂದ್ರ, ಸಿ.ಬಿ.ವೆಂಕಟೇಶ್, ಚಂದ್ರಪ್ಪ ಇತರರಿದ್ದರು.
Published on
ಶಿಕಾರಿಪುರ: ಪಠ್ಯ ಕಲಿಕೆ ಜತೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆ ಸಮಾರೋಪದಲ್ಲಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಇದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ವೇದಿಕೆ ಕಲ್ಪಿಸುವುದು ಅವಶ್ಯಕ. ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಪಾಲಕರು ಮಕ್ಕಳ ಮೇಲೆ ಸಾಕಷ್ಟು ಭರವಸೆ ಇಟ್ಟಿರುತ್ತಾರೆ. ಮಕ್ಕಳು ದುಶ್ಚಟಗಳಿಗೆ ದಾಸರಾಗದೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ಸಾಧನೆ ಮಾಡಲು ಮುಖ್ಯ ಕಾಲಘಟ್ಟ. ಈ ಸಮಯದಲ್ಲಿ ಪರಿಶ್ರಮದಿಂದ ಅಧ್ಯಯನ ನಡೆಸಬೇಕು. ಗುರಿ, ಸಂಕಲ್ಪ ಶಕ್ತಿ, ಬಲ ಮತ್ತು ಛಲದಿಂದ ಕನಸುಗಳನ್ನು ನನಸು ಮಾಡಿಕೊಳ್ಳಬೇಕು ಎಂದರು.
ಮೈತ್ರಾದೇವಿ ಸ್ಮರಣಾರ್ಥ 2024-25ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾಲೇಜಿನ ಪ್ರಾಚಾರ್ಯ ಸಿ.ಬಿ.ವೆಂಕಟೇಶ್, ಉಪಾಧ್ಯಕ್ಷ ಕೆ.ಹಾಲಪ್ಪ, ಡಿಡಿಪಿಯು ಚಂದ್ರಪ್ಪ, ಡಾ. ಸಫ್ರಾಜ್ ಚಂದ್ರಗುತ್ತಿ, ಹೊಬ್ಯಾನಾಯ್ಕಾ, ಕೆ.ಜಿ.ವಸಂತ್ ಗೌಡ, ರುಕ್ಮಿಣಮ್ಮ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net