ಶಿರಾಳಕೊಪ್ಪ ಸಮೀಪದ ಸುಣ್ಣದಕೊಪ್ಪ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ ಶಾಸಕ ಬಿ.ವೈ.ರಾಘವೇಂದ್ರ. ಕೆ.ಎಸ್.ಗುರುಮೂರ್ತಿ ಸಂಕ್ಲಾಪುರ ಹನುಮಂತಪ್ಪ, ಯೋಗೀಶಪ್ಪ ಇತರರಿದ್ದರು.
Published on:
Copied
Follow Us
ಶಿರಾಳಕೊಪ್ಪ: ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ರಾಜಕೀಯ ಮಾಡುವ ಬದಲು ಜನರ ಹಿತದೃಷ್ಟಿಯಿಂದ ಕೆಲಸ ಮಾಡಬೇಕು. ರೈತರು ಹಾಗೂ ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ಸಮೀಪದ ಸುಣ್ಣದಕೊಪ್ಪ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿ ರೈತರಿಗೆ ಅನುಕೂಲವಾಗುವ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದರು. ಯಡಿಯೂರಪ್ಪ ಮಾಡಿದ ಕೆಲಸಗಳಿಗೆ ಇದೀಗ ಅವರು ಬಾಗಿನ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಹಿಂದಿನ ಸರ್ಕಾರ ಕೈಗೊಂಡ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗಳ ಶ್ರೇಯಸ್ಸನ್ನು ಪಡೆದುಕೊಳ್ಳಲು ಕೆಲವರು ಮುಂದಾಗಿದ್ದಾರೆ. ತಾಲೂಕಿನಲ್ಲಿ 290 ಕೆರೆಗಳಿಗೆ 850 ಕೋಟಿ ರೂ. ವೆಚ್ಚದಲ್ಲಿ ನೀರಾವರಿ ಕಲ್ಪಿಸಲಾಗಿದೆ. 220 ಕೆ.ವಿ ವಿದ್ಯುತ್ ಉಪಕೇಂದ್ರ ನಿರ್ಮಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. 250 ಹಾಸಿಗೆ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಆಗಿರುವುದು ಕ್ಷೇತ್ರದ ಅಭಿವೃದ್ಧಿಗೆ ಸಾಕ್ಷಿ ಎಂದರು.
ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ರಸ್ತೆ ನಿರ್ಮಿಸಿಕೊಡುವಂತೆ ಮಹಿಳೆಯರು ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ವಿಜಯೇಂದ್ರ, ರಸ್ತೆ ನಿರ್ಮಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆಸೂಚಿಸಿದರು. ಪ್ರಗತಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರೊಂದಿಗೆ ಸಂವಾದ ನಡೆಸಿದರು.
ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಬಿಜೆಪಿ ತಾಲೂಕು ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ, ರೈತ ಮೋರ್ಚಾ ತಾಲೂಕು ಅಧ್ಯಕ್ಷ ಯೋಗೀಶಪ್ಪ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಳವಳ್ಳಿ ಚಂದ್ರು ಇತರರಿದ್ದರು.