ಅಡ್ಡಪಲ್ಲಕ್ಕಿ ಮಹೋತ್ಸವ ವಿಶೇಷ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಬಾಳೆಹೊನ್ನೂರು, ಉಜ್ಜಯಿನಿ, ಕೇದಾರ, ಶ್ರೀಶೈಲ ಮತ್ತು ಕಾಶಿ ಪೀಠದ ಶ್ರೀಗಳನ್ನು ಹೊತ್ತ ಅಡ್ಡಪಲ್ಲಕ್ಕಿ ಮಹೋತ್ಸವ 4 ಕಿ.ಮೀ. ಸಂಚರಿಸಿ ಮಾನವಧರ್ಮ ಮಂಟಪಕ್ಕೆ ತಲುಪಲಿದೆ. ವಿವಿಧ ಕಲಾತಂಡಗಳು ಪಾಲ್ಗೊಳ್ಳಲಿವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.