ಹಾಲು, ಕೆಎಸ್‌ಆರ್‌ಟಿಸಿ ಪ್ರಯಾಣ ದರ ಏರಿಕೆಗೆ ಜೆಡಿಎಸ್ ಆಕ್ರೋಶ ksrtc journey

ಶಿವಮೊಗ್ಗ: ಹಾಲು ಹಾಗೂ ಕೆಎಸ್‌ಆರ್‌ಟಿಸಿ ಪ್ರಯಾಣ ದರ ಏರಿಕೆ ವಿರೋಧಿಸಿ, ಸ್ಟಿಂಗ್ ಆಪರೇಷನ್ ತನಿಖೆ ವಿಷಯದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಹಳ್ಳಿ ಗುಗ್ಗು ಎಂದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್ ಮುಖಂಡರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ksrtc journey
ಹಾಲು ಹಾಗೂ ಕೆಎಸ್‌ಆರ್‌ಟಿಸಿ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಮುಖಂಡರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಾರದಾ ಪೂರ‌್ಯಾನಾಯ್ಕಾ, ಕೆ.ಬಿ.ಪ್ರಸನ್ನಕುಮಾರ್, ರಾಮಕೃಷ್ಣ, ಗೀತಾ ಸತೀಶ್, ದೀಪಕ್ ಸಿಂಗ್ ಇತರರಿದ್ದರು.
Published on: 

ಶಿವಮೊಗ್ಗ: ಹಾಲು ಹಾಗೂ ಕೆಎಸ್‌ಆರ್‌ಟಿಸಿ ಪ್ರಯಾಣ ದರ ಏರಿಕೆ ವಿರೋಧಿಸಿ, ಸ್ಟಿಂಗ್ ಆಪರೇಷನ್ ತನಿಖೆ ವಿಷಯದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಹಳ್ಳಿ ಗುಗ್ಗು ಎಂದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್ ಮುಖಂಡರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಾಲು ಹಾಗೂ ಇತರ ಉತ್ಪನ್ನಗಳ ಬೆಲೆಯನ್ನು 8ರೂ.ನಿಂದ 35 ರೂ.ವರೆಗೆ ಸರ್ಕಾರ ಏರಿಕೆ ಮಾಡಿದೆ. ಕೆಎಸ್‌ಆರ್‌ಟಿಸಿ ಪ್ರಯಾಣ ದರವನ್ನು ಶೇ. 23ರಷ್ಟು ಹೆಚ್ಚಿಸಿದೆ. ಇದರಿಂದ ಜನರ ಮೇಲೆ ಭಾರಿ ಆರ್ಥಿಕ ಹೊರೆ ಬಿದ್ದಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೈತರು, ಗ್ರಾಮೀಣ ಜನರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಮತ್ತಷ್ಟು ಹೊರೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಟಿಂಗ್ ಆಪರೇಷನ್ ದೂರಿನ ತನಿಖೆ ವಿಷಯದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು. ಕಾಲಮಿತಿಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಲು ಸೂಚಿಸಬೇಕು ಎಂದು ಆಗ್ರಹಿಸಿದರು.

ಶಾಸಕಿ ಶಾರದಾ ಪೂರ‌್ಯಾನಾಯ್ಕಾ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾಧ್ಯಕ್ಷ ರಾಮಕೃಷ್ಣ, ನಗರಾಧ್ಯಕ್ಷ ದೀಪಕ್ ಸಿಂಗ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಮಾಜಿ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ವಿನಯ್, ದಾದಾಪೀರ್, ನರಸಿಂಹ ಗಂಧದಮನೆ, ತಿಪ್ಪೇಸ್ವಾಮಿ, ಶ್ರೀನಿವಾಸ್, ಉಮಾಶಂಕರ ಉಪಾಧ್ಯ, ಎಚ್.ಆರ್.ತಂಗರಾಜ್ ಇತರರಿದ್ದರು.