ನಶೆಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

ಸಾಗರದಲ್ಲಿ ಆಯೋಜಿಸಿದ್ದ ಶಾಂತಿಸಭೆಯಲ್ಲಿ ಎಸ್ಪಿ ಬಿ.ನಿಖಿಲ್ ಮಾತನಾಡಿದರು. ಡಾ. ಬೆನಕಪ್ರಸಾದ್, ಸಂತೋಷ್‌ಕುಮಾರ್ ಶೆಟ್ಟಿ ಇದ್ದರು.
ಸಾಗರದಲ್ಲಿ ಆಯೋಜಿಸಿದ್ದ ಶಾಂತಿಸಭೆಯಲ್ಲಿ ಎಸ್ಪಿ ಬಿ.ನಿಖಿಲ್ ಮಾತನಾಡಿದರು. ಡಾ. ಬೆನಕಪ್ರಸಾದ್, ಸಂತೋಷ್‌ಕುಮಾರ್ ಶೆಟ್ಟಿ ಇದ್ದರು.
Published on
ಸಾಗರ: ತಾಲೂಕಿನಲ್ಲಿ ಗಾಂಜಾ ಸಾಗಣೆ, ಸೇವನೆ ನಿಯಂತ್ರಣಕ್ಕೆ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಹೇಳಿದರು.
ಗಣಪತಿ ಹಬ್ಬ, ಈದ್‌ಮಿಲಾದ್ ಅಂಗವಾಗಿ ಪೊಲೀಸ್ ಇಲಾಖೆಯಿಂದ ಸಾಗರದಲ್ಲಿ ಏರ್ಪಡಿಸಿದ್ದ ಶಾಂತಿಸಭೆಯಲ್ಲಿ ಮಾತನಾಡಿ, ಸಾರ್ವಜನಿಕರು ಪೊಲೀಸ್ ಇಲಾಖೆಯ ಸಂಖ್ಯೆಗೆ ಮಾಹಿತಿ ನೀಡುವುದು ನೇರವಾಗಿ ಶಿವಮೊಗ್ಗ ಕಚೇರಿಗೆ ಬರುತ್ತದೆ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಹಬ್ಬಗಳನ್ನು ಎರಡೂ ಸಮುದಾಯದವರು ಸೌಹಾರ್ದದಿಂದ ಆಚರಿಸಬೇಕು ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಗಾಂಜಾ ಸೇವನೆ ಹಾಗೂ ಸಾಗಣೆಗೆ ಸಂಬಂಧಿಸಿ ಎರಡು ಸಾವಿರಕ್ಕೂ ಹೆಚ್ಚು ದೂರುಗಳು ಬಂದಿವೆ. ಗಾಂಜಾ ಮಾರಾಟ ಮಾಡುತ್ತಿದ್ದ 200ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ನಶೆಮುಕ್ತ ಸಮಾಜ ನಿರ್ಮಾಣ ಎಲ್ಲರ ಹೊಣೆ. ಪೊಲೀಸ್ ಹಾಗೂ ಜನರು ಒಟ್ಟಾದರೆ ಅಪರಾಧಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದರು.
ಪೊಲೀಸ್ ಉಪಾಧೀಕ್ಷಕ ಡಾ. ಬೆನಕಪ್ರಸಾದ್, ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಸಂತೋಷ್‌ಕುಮಾರ್ ಶೆಟ್ಟಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net