ಕನ್ನಡ ನಾಡು ಕಟ್ಟುವ ಕಾಯಕಕ್ಕೆ ಕೈಜೋಡಿಸಿ

ಭದ್ರಾವತಿಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ  ಡಿ.ಮಂಜುನಾಥ್, ಬಿ.ಎಸ್.ಗಣೇಶ್, ಎಂ.ಎಸ್.ಸುಧಾಮಣಿ, ಕೆ.ಎನ್.ಹೇಮಂತ್ ಇತರರಿದ್ದರು.
ಭದ್ರಾವತಿಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಡಿ.ಮಂಜುನಾಥ್, ಬಿ.ಎಸ್.ಗಣೇಶ್, ಎಂ.ಎಸ್.ಸುಧಾಮಣಿ, ಕೆ.ಎನ್.ಹೇಮಂತ್ ಇತರರಿದ್ದರು.
Published on
ಭದ್ರಾವತಿ: ರಾಷ್ಟ್ರಕವಿ ಕುವೆಂಪು ಅವರು ನಾಡಗೀತೆ ರಚಿಸಿ 100 ವರ್ಷಗಳು ಕಳೆದಿವೆ. ಇಂತಹ ಸಂದರ್ಭದಲ್ಲಿ ನೆಲ, ಜಲ, ಭಾಷೆ ಮೇಲಿನ ಅಭಿಮಾನ ಮತ್ತಷ್ಟು ಹೆಚ್ಚಿಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಹೇಳಿದರು.
 ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದಿಂದ ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು. 
 ಜಗತ್ತಿನ ಸಮೃದ್ಧವಾದ ಭಾಷೆಗಳಲ್ಲಿ ಕನ್ನಡವೂ ಸಹ ಒಂದು. ಇಂತಹ ಭಾಷೆಯನ್ನು ಮತ್ತಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಕನ್ನಡ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಇದನ್ನು ಗಮನಿಸಿದಾಗ ಭಾಷೆಗೆ ಎಷ್ಟೊಂದು ಮಹತ್ವವಿದೆ ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕು. ಕನ್ನಡನಾಡು ಕಟ್ಟುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು.
ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್.ಸುಧಾಮಣಿ, ಗ್ಯಾರಂಟಿ ಯೋಜನೆ ಸಮಿತಿ ತಾಲೂಕು ಅಧ್ಯಕ್ಷ ಬಿ.ಎಸ್.ಗಣೇಶ್, ದೇವಸ್ಥಾನ ಪ್ರಧಾನ ಅರ್ಚಕ ರಂಗನಾಥ ಶರ್ಮ, ನಗರಸಭೆ ಸದಸ್ಯೆ ಅನುಪಮಾ ಚನ್ನೇಶ್, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಿ.ರಮಾಕಾಂತ್, ಹಳೇನಗರ ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್, ನಿವೃತ್ತ ಶಿಕ್ಷಕ ಜುಂಜ್ಯಾನಾಯ್ಕ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net