ರಾಜ್ಯದಲ್ಲಿ ಮುಖ್ಯಮಂತ್ರಿ ಖುರ್ಚಿಗಾಗಿ ಸ್ವಪಕ್ಷದಲ್ಲೇ ಬಡಿದಾಟ ನಡೆಯುತ್ತಿದೆ. ಬಡಿದಾಟವನ್ನು ಬದಿಗಿಟ್ಟು ರೈತರು, ಬಡವರ ಬಗ್ಗೆ ರಾಜ್ಯ ಸರ್ಕಾರ ಕಿಂಚಿತ್ತಾದರೂ ಗಮನ ಹರಿಸಬೇಕಿದೆ. ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿನ ಬದಲಾವಣೆ ಬಗ್ಗೆ ಅವರ ಪಕ್ಷದ ಸಚಿವರೇ ಮಾತನಾಡಿಕೊಳ್ಳುತ್ತಿದ್ದಾರೆ. ಮತದಾನೋತ್ತರ ಸಮೀಕ್ಷೆ ನಿಜವಾಗಲಿದ್ದು, ಬಿಹಾರದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.