ಪರೋಪಕಾರಂ ಸಂಸ್ಥೆ ಸ್ವಯಂಸೇವಕರು ಪ್ರತಿ ಭಾನುವಾರ ಸ್ವಚ್ಛತಾ ಕಾರ್ಯ ನಡೆಸುತ್ತಾರೆ. ಈ ವಾರ ಮೊದಲು ಹುಚ್ಚರಾಯಸ್ವಾಮಿ ದೇವಸ್ಥಾನದ ಕಲ್ಯಾಣಿ ಸುತ್ತಮುತ್ತ ಬೆಳೆದಿದ್ದ ಹುಲ್ಲು, ಕಳೆ ಮತ್ತು ಮುಳ್ಳಿನ ಪೊದೆಗಳನ್ನು ತೆರವುಗೊಳಿಸಿದರು. ಕಲ್ಯಾಣಿ ಮೆಟ್ಟಿಲುಗಳ ಮೇಲಿದ್ದ ಪಾಚಿ ಸ್ವಚ್ಛಗೊಳಿಸಿದರು. ಸಾರ್ವಜನಿಕರು ಎಸೆದಿದ್ದ ಪ್ಲಾಸ್ಟಿಕ್ ಬಾಟಲಿಗಳು, ಕಸದ ಕವರ್ ಹಾಗೂ ಅನುಪಯುಕ್ತ ಪೂಜಾ ಸಾಮಗ್ರಿಗಳನ್ನು ಸಂಪೂರ್ಣ ಆಯ್ದು ವಿಲೇವಾರಿ ಮಾಡಿದರು.