ಶಿವಮೊಗ್ಗ ಜಿಲ್ಲೆ ನೈಸರ್ಗಿಕ ಸೌಂದರ್ಯದಿಂದ ಕೂಡಿದೆ. ಹೊರಾಂಗಣ ಚಿತ್ರೀಕರಣಕ್ಕೆ ಸೂಕ್ತವಾಗಿದೆ. ಇಲ್ಲಿ ಚಿತ್ರೀಕರಣ ಘಟಕ ಆರಂಭವಾದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗೂ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಹೋಬಳಿಯ ಜಾಜುಹಳ್ಳಿಯಲ್ಲಿ 25 ಎಕರೆ ಜಮೀನು ಮಂಜೂರು ಮಾಡುವಂತೆ ಕೋರಲಾಗಿದೆ ಎಂದು ಮೆಹಬೂಬ್ ಪಾಷಾ ಹೇಳಿದರು. ಹೊಸದಾಗಿ ಸ್ಥಾಪನೆಯಾಗುವ ಸ್ಟುಡಿಯೋದಲ್ಲಿ ಚಿತ್ರೀಕರಣ, ರೆಕಾರ್ಡಿಂಗ್ ಮತ್ತು ಲ್ಯಾಬ್ ಡೆವಲಪ್‌ಮೆಂಟ್‌ನಂತಹ ಆಧುನಿಕ ತಂತ್ರಜ್ಞಾನದ ಸೌಲಭ್ಯ ಕಲ್ಪಿಸಲಾಗುವುದು. ಇದರಿಂದ ಚಿತ್ರದ ಸಂಪೂರ್ಣ ಕೆಲಸಗಳು ಒಂದೇ ಸೂರಿನಡಿ ನಡೆಯಲು ಸಾಧ್ಯವಾಗುತ್ತದೆ ಎಂದರು.