ಮಕ್ಕಳ ಚಟುವಟಿಕೆ ಮೇಲೆ ನಿಗಾ ಇಡಿ

ಭದ್ರಾವತಿಯ ಸರ್ಕಾರಿ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಎಸ್.ಗೋವಿಂದ ಅವರು ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಭದ್ರಾವತಿಯ ಸರ್ಕಾರಿ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಎಸ್.ಗೋವಿಂದ ಅವರು ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
Published on
ಭದ್ರಾವತಿ: ಮಕ್ಕಳನ್ನು ಕೇವಲ ಶಾಲೆಗಳಿಗೆ ಕಳುಹಿಸಿದರೆ ಸಾಲದು. ಅವರ ಮೇಲೆ ನಿಗಾ ಇಡಬೇಕು. ಮಕ್ಕಳ ಶಿಕ್ಷಣದ ಜತೆಗೆ ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಪಾಲಕರೂ ಕೈಜೋಡಿಸಬೇಕು ಎಂದು ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಸರ್ಕಾರಿ ಪ್ರೌಢಶಾಲಾ ವಿಭಾಗದ ಶೈಕ್ಷಣಿಕ ಸಲಹೆಗಾರ ಕಣ್ಣಪ್ಪ ಹೇಳಿದರು.
ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಶುಕ್ರವಾರ ಆಯೋಜಿಸಿದ್ದ ಪಾಲಕರು-ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉನ್ನತ ಸೌಲಭ್ಯಗಳು ಇಲ್ಲದೇ ಇರುವ ಸಂದರ್ಭದಲ್ಲಿ ಶಾಲೆಗಳನ್ನು ನಿರ್ಮಿಸುವಲ್ಲಿ ನಮ್ಮ ಪೂರ್ವಿಕರ ಶ್ರಮ ಹೆಚ್ಚಿನದು. ಇಂತಹ ಶಾಲೆಗಳು ಈಗ ಕಣ್ಮರೆಯಾಗುತ್ತಿವೆ. ಸರ್ಕಾರಿ ಶಾಲೆ ಉಳಿಸಿಕೊಳ್ಳುವುದು ಕಷ್ಟದ ಕೆಲಸವಾಗಿದೆ. ಮಕ್ಕಳನ್ನು ಪ್ರತಿಯೊಬ್ಬರೂ ಪ್ರೀತಿಸಬೇಕು. ಅವರನ್ನು ಭವಿಷ್ಯದ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರು, ಪಾಲಕರು ಹಾಗೂ ಸಮಾಜದ ಕರ್ತವ್ಯ ಎಂದರು. 
ಹಳೆಯ ವಿದ್ಯಾರ್ಥಿ, ಸಿನಿಮಾ ನಿರ್ಮಾಪಕ ಎಸ್.ಗೋವಿಂದ ಮಾತನಾಡಿ, ಸರ್ಕಾರಿ ಶಾಲೆಗಳ ಬಗ್ಗೆ ತಾತ್ಸಾರ ಬೇಡ. ಶಾಲೆಯಲ್ಲಿ ಓದಿರುವ ಬಹಳಷ್ಟು ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಈಗಿನ ಮಕ್ಕಳು ಮಿತಿಮೀರಿ ಮೊಬೈಲ್ ಬಳಕೆಯಿಂದ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸುತ್ತಿಲ್ಲ. ಅಲ್ಲದೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಬೇಸರ ಸಂಗತಿ ಎಂದು ಹೇಳಿದರು.
ತಮಿಳು ಸಂಘಂ ಮಾಜಿ ಅಧ್ಯಕ್ಷ ರವಿಕುಮಾರ್, ನಿವೃತ್ತ ಶಿಕ್ಷಕ ಕಾಂತಪ್ಪ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಿ.ರಮಾಕಾಂತ್, ವಿಐಎಸ್‌ಎಲ್ ನಿವೃತ್ತ ನೌಕರ ಸುರೇಶ್ ವರ್ಮಾ, ಮೋಹನ್, ಬಸವರಾಜ್, ಮುನಿರಾಜ್, ಎನ್.ಮಂಜುನಾಥ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net