ಎರಡ್ಮೂರು ದಿನಗಳ ಹಿಂದೆಯೇ ಚಿರತೆ ಸಾವಿಗೀಡಾಗಿರುವ ಸಾಧ್ಯತೆಯಿದೆ. ದುರ್ವಾಸನೆ ತೀವ್ರವಾದ ಹಿನ್ನೆಲೆಯಲ್ಲಿ ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಿರತೆಗೆ ನಾಲ್ಕೈದು ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ವಲಯ ಅರಣ್ಯ ಅಧಿಕಾರಿ ಜಾವೀದ್ ತಿಳಿಸಿದ್ದಾರೆ.