ಭದ್ರಾವತಿಯಲ್ಲಿ ನಗರಸಭೆ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಜಿಲ್ಲಾ ಖಜಾನೆ ಉಪನಿರ್ದೇಶಕಿ ಸಾವಿತ್ರಿ ಅವರನ್ನು ಗೌರವಿಸಲಾಯಿತು. ಗೀತಾ ರಾಜ್‌ಕುಮಾರ್, ಬಿ.ಕೆ.ಮೋಹನ್, ಪ್ರೇಮಾ, ಕೆ.ಎನ್.ಹೇಮಂತ್ ಇತರರಿದ್ದರು.
Published on:
Copied
Follow Us
ಭದ್ರಾವತಿ: ಮಹಿಳೆಯರು ಇಂದು ಸಮಾಜದ ಬಹುತೇಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಪುರುಷರನ್ನೂ ಮೀರಿಸುವ ಮಟ್ಟಿಗೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದಾರೆ ಎಂದು ನಗರಸಭೆ ಸದಸ್ಯ ಬಿ.ಕೆ.ಮೋಹನ್ ಹೇಳಿದರು.
ನಗರದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಗರಸಭೆಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಸಮಾಜದಲ್ಲಿ ಇನ್ನೂ ಹೆಚ್ಚು ಸಂಘಟಿತರಾಗುವ ಅಗತ್ಯವಿದೆ. ಈ ಮೂಲಕ ಉತ್ತಮ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಚಿಂತಿಸಬೇಕಿದೆ ಎಂದರು.
ಜಿಲ್ಲಾ ಖಜಾನೆ ಉಪನಿರ್ದೇಶಕಿ ಸಾವಿತ್ರಿ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಮಹಿಳೆಯರನ್ನು ನೋಡುವ ದೃಷ್ಟಿಕೋನ ಯಾವುದೇ ರೀತಿ ಇರಲಿ. ನಾವು ನಮ್ಮ ಗುರಿ ತಲುಪುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಸರ್ಕಾರ ಮಹಿಳೆಗಾಗಿ ರೂಪಿಸಿರುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ, ಪೌರಾಯುಕ್ತ ಕೆ.ಎನ್.ಹೇಮಂತ್, ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್.ಗಣೇಶ್, ಬಸವರಾಜ ಆನೇಕೊಪ್ಪ, ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ ಇತರರಿದ್ದರು.