ಮಹಿಳೆ ಹತ್ಯೆಗೈದವನಿಗೆ ಜೀವಾವಧಿ ಶಿಕ್ಷೆ | Conviction

ಮಂಜುನಾಥ
ಮಂಜುನಾಥ
Published on
ಸೊರಬ: ಜಾಗದ ವಿಚಾರವಾಗಿ ನಡೆದ ಜಗಳದಲ್ಲಿ ಮಹಿಳೆಯನ್ನು ಕೊಲೆ ಮಾಡಿದ ಮಂಜುನಾಥ (25)ಗೆ ಸಾಗರ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ತಾಲೂಕಿನ ಸಮನವಳ್ಳಿ ಗ್ರಾಮದಲ್ಲಿ 2020ರ ಆ.25ರಂದು ರಾಜೇಶ್ವರಿ (25) ಎಂಬುವರು ಮನೆ ಮುಂದೆ ಕುಳಿತಿದ್ದಾಗ ಅದೇ ಗ್ರಾಮದ ಮಂಜುನಾಥ ಜಾಗದ ವಿಚಾರವಾಗಿ ಜಗಳ ತೆಗೆದಿದ್ದ. ಆಗ ರಾಜೇಶ್ವರಿ ದೂರು ಕೊಡಲು ಮುಂದಾದಾಗ ಮಂಜುನಾಥ ಏಕಾಏಕಿ ರಾಜೇಶ್ವರಿ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿ ಸಿಪಿಐ ಆರ್.ಡಿ.ಮರುಳಸಿದ್ದಪ್ಪ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶ ಆರ್.ರವೀಂದ್ರ ಅವರು ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ಅಣ್ಣಪ್ಪ ನಾಯಕ್ ವಾದ ಮಂಡಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net