ಹೊಸನಗರ ತಾಲೂಕಿನ ಅಡುಗೋಡಿ ನಿವಾಸಿ ವೆಂಕಟೇಶ್ (36) ಬಂಧಿತ ಆರೋಪಿ. ಅರಣ್ಯ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ(Obstruction of duty)ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.15ರಂದು ಜೆಎಂಎಫ್‌ಸಿ ನ್ಯಾಯಾಲಯ(JMFC Court) ಈತನಿಗೆ ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ನ್ಯಾಯಾಂಗ ಬಂಧನ ವಿಧಿಸಿತ್ತು. ಜೀಪಿನಲ್ಲಿ ಕರೆದೊಯ್ಯುವಾಗ ಬಟ್ಟೆಮಲ್ಲಪ್ಪ ಗ್ರಾಮದ ಹೋಟೆಲ್ ಬಳಿ ಆಹಾರ ತರಲು ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜೀಪಿನಲ್ಲಿದ್ದ ಸಿಬ್ಬಂದಿ ಚಕ್ರಪಾಣಿ ಮತ್ತು ಚಾಲಕ ನಾಗೇಂದ್ರ ಮೇಲೆ ದಾಳಿ ನಡೆಸಿ ಆರೋಪಿ ಪರಾರಿಯಾಗಿದ್ದ.