ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ಬಂಧಿತ ಆರೋಪಿ. ಈತ ಶಿವಮೊಗ್ಗದ ಕೆಎಚ್‌ಬಿ ಕಾಲನಿಯ ನಿವಾಸಿ, ರೈತ ಮಂಜುನಾಥ ಹಂಜಿ ಅವರಿಂದ 15 ಲಕ್ಷ ರೂ. ಪಡೆದಿದ್ದ. ತಾನು ಡಿ.ಕೆ.ಶಿವಕುಮಾರ್ ಅವರ ಆಪ್ತ ಸಹಾಯಕ(Personal assistant)ನೆಂದು ಪರಿಚಯಿಸಿಕೊಂಡು ರಿಕ್ರಿಯೇಷನ್ ಕ್ಲಬ್(Recreation Club) ಪರವಾನಗಿ ಕೊಡಿಸುವುದಾಗಿ ನಂಬಿಸಿದ್ದ. ಫೋನ್‌ಪೇ ಮೂಲಕ ಹಾಗೂ ನಗದು ರೂಪದಲ್ಲಿ ಹಂತ ಹಂತವಾಗಿ 15 ಲಕ್ಷ ರೂ. ಪಡೆದು ವಂಚನೆ ಮಾಡಿದ್ದ.