ಭದ್ರಾವತಿಯಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ Ganja Case

ಭದ್ರಾವತಿ ಸತ್ಯಸಾಯಿನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ 30 ಸಾವಿರ ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
Ganja Case
ಗಾಂಜಾ ಆರೋಪಿಯನ್ನು ಬಂಧಿಸಿದ ಭದ್ರಾವತಿ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಎನ್.ಭಾರತಿ ನೇತೃತ್ವದ ತಂಡ.
Published on: 

ಶಿವಮೊಗ್ಗ: ಭದ್ರಾವತಿ ಸತ್ಯಸಾಯಿನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ 30 ಸಾವಿರ ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಭದ್ರಾವತಿ ಟೌನ್ ಸೀಗೆಬಾಗಿ ನೇತಾಜಿ ರಸ್ತೆ ನಿವಾಸಿ ಅಜಗರ್ ಅಲಿ(32) ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಎನ್.ಭಾರತಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ. ಆತನಿಂದ 600 ಗ್ರಾಂ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net