ಬಿಎಂಡಬ್ಲ್ಯುಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದವ ಬಂಧನ | Ganja case

ಬಿಎಂಡಬ್ಲುೃ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದರು.
ಬಿಎಂಡಬ್ಲುೃ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದರು.
Published on
ಶಿವಮೊಗ್ಗ: ಐಷಾರಾಮಿ ಬಿಎಂಡಬ್ಲ್ಯು(BMW) ಕಾರಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ವಿನೋಬನಗರ ಠಾಣೆಯ ಪೊಲೀಸರು ಬಂಧಿಸಿದ್ದು,  1.10 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. 
ಮೌಲಾಸಾಬಾ ಕರ್ಜಗಿ(46) ಬಂಧಿತ ಆರೋಪಿ. ವಿನೋಬನಗರ  ಠಾಣಾ ವ್ಯಾಪ್ತಿಯ ಸೋಮಿನಕೊಪ್ಪ ಮಾರ್ಗವಾಗಿ ಕಾರಿನಲ್ಲಿ ಗಾಂಜಾ(Ganja) ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿನೋಬನಗರ ಪಿಎಸ್‌ಐ ತಿರುಮಲೇಶ್ ಹಾಗೂ ಸಿಬ್ಬಂದಿ ತಂಡವು ದಾಳಿ ನಡೆಸಿ ವಾಹನ ತಡೆದು ತಪಾಸಣೆ ನಡೆಸಿದ್ದರು.
ಬಂಧಿತನಿಂದ 2.65 ಕೆಜಿ ಗಾಂಜಾ, ಬಿಎಂಡಬ್ಲ್ಯು ಕಾರು ಮತ್ತು ಮೊಬೈಲ್ ಜಪ್ತಿ ಮಾಡಿದ್ದಾರೆ. ವಿನೋಬನಗರ ಪೊಲೀಸ್ ಠಾಣೆ(Vinobnagar police station)ಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net