ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ | Sexual assault

ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Published on

ಪ್ರಮುಖ ಮುಖ್ಯಾಂಶಗಳು

  • ಮಹಿಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ದೌರ್ಜನ್ಯ
  • ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದ ವ್ಯಕ್ತಿ
  • ಶಿಕ್ಷೆ ಮತ್ತು ದಂಡ ವಿಧಿಸಿದ ಶಿವಮೊಗ್ಗ ನ್ಯಾಯಾಲಯ
ಶಿವಮೊಗ್ಗ: ಮಹಿಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ನುಗ್ಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ(Sexual assault)ವೆಸಗಿದ್ದಲ್ಲದೆ, ಜೀವ ಬೆದರಿಕೆ ಹಾಕಿ ಜಾತಿ ನಿಂದನೆ(Caste abuse) ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿದೆ.
ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದವ. 2023ರಂದು ನ.2ರಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆತ ಜೀವ ಬೆದರಿಕೆ ಹಾಕಿದ್ದ. ಜಾತಿ ನಿಂದನೆ ಮಾಡಿದ್ದ ಎಂದು ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ವಿನೋಬನಗರ ಠಾಣೆಯಲ್ಲಿ ಎಸ್‌ಸಿ, ಎಸ್‌ಟಿ ಕಾಯ್ದೆ(SC, ST Act)ಯಡಿ ಪ್ರಕರಣ ದಾಖಲಾಗಿತ್ತು.
ತನಿಖಾಧಿಕಾರಿಯಾಗಿದ್ದ ಶಿವಮೊಗ್ಗ ಉಪವಿಭಾಗ-ಬಿ ಡಿವೈಸ್‌ಪಿ ಎಂ. ಸುರೇಶ್ ಪ್ರಕರಣದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ(Indictment List) ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶೆ ಕೆ.ಪಿ.ಪ್ರೀತಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ್ದರು. ನೊಂದ ಮಹಿಳೆಗೆ 15 ಸಾವಿರ ರೂ. ಪರಿಹಾರ ನೀಡಿ ಆದೇಶಿಸಿದ್ದರು. ಸರ್ಕಾರಿ ಅಭಿಯೋಜಕಿ ಪಿ.ಒ.ಪುಷ್ಪಾ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net