ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದವನಿಗೆ 3 ವರ್ಷ ಜೈಲು | Sexual harassment

ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Published on

ಪ್ರಮುಖ ಮುಖ್ಯಾಂಶಗಳು

  • ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ ಯುವಕ
  • ಅಪ್ರಾಪ್ತೆ ನೀಡಿದ ದೂರಿನ ಮೇರೆಗೆ ಭದ್ರಾವತಿ ಕಾಗದನಗರ ಠಾಣೆಯಲ್ಲಿ ಪ್ರಕರಣ
  • ಶಿಕ್ಷೆ ವಿಧಿಸಿದ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)
ಶಿವಮೊಗ್ಗ: ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡು ಲೈಂಗಿಕ ಕಿರುಕುಳ(Sexual harassment) ನೀಡಿದ್ದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ವು ಮೂರು ವರ್ಷ ಕಾರಾಗೃಹ ಶಿಕ್ಷೆ ಮತ್ತು 31 ಸಾವಿರ ರೂ. ದಂಡ ವಿಧಿಸಿದೆ.
ಭದ್ರಾವತಿ ತಾಲೂಕಿನ 20 ವರ್ಷದ ಯುವಕ ಶಿಕ್ಷೆಗೆ ಒಳಗಾದವ. ಈತ 2024ರಲ್ಲಿ 16 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಅಪ್ರಾಪ್ತೆ(Minor) ನೀಡಿದ ದೂರಿನ ಮೇರೆಗೆ ಭದ್ರಾವತಿ ಕಾಗದನಗರ ಪೊಲೀಸ್ ಠಾಣೆ(Bhadravati Kaganagar Police station)ಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆಗಿನ ತನಿಖಾಧಿಕಾರಿ(Investigator)ಯಾಗಿದ್ದ ಪಿಎಸ್‌ಐ ಇ.ಕವಿತಾ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net