ಹೊಸನಗರ: ತಾಲೂಕಿನ ಜಯನಗರ ಸಮೀಪ ಶುಕ್ರವಾರ ಬೆಳಗಿನ ಜಾವ ಖಾಸಗಿ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಂಗಳೂರಿನಿಂದ ಶಿವಮೊಗ್ಗ-ಹೊಸನಗರ ಮಾರ್ಗವಾಗಿ ಕುಂದಾಪುರಕ್ಕೆ ಸಾಗುತ್ತಿದ್ದ ಖಾಸಗಿ ಬಸ್ ತಾಲೂಕಿನ ಜಯನಗರ ಸಮೀಪದ ಚಾಮುಂಡಿ ಬೆಟ್ಟ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಚಿಕಿತ್ಸೆಗಾಗಿ ಹೊಸನಗರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು.