ಹೊಸ ಇತಿಹಾಸ ಸೃಷ್ಟಿಸಿದ ಮಾರಿ ಜಾತ್ರೆ

ಸಾಗರದಲ್ಲಿ ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಗೋಪಾಲಕೃಷ್ಣ ಬೇಳೂರು, ಕೆ.ಎನ್.ನಾಗೇಂದ್ರ ಮತ್ತಿತರರು ಇದ್ದರು.
ಸಾಗರದಲ್ಲಿ ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಗೋಪಾಲಕೃಷ್ಣ ಬೇಳೂರು, ಕೆ.ಎನ್.ನಾಗೇಂದ್ರ ಮತ್ತಿತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅನಿಸಿಕೆ
  • ನ್ಯಾಸ ಪ್ರತಿಷ್ಠಾನದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ
  • ಪ್ರತಿದಿನ ಲಕ್ಷಾಂತರ ಜನರಿಂದ ದೇವರ ದರ್ಶನ
ಸಾಗರ: ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನ ಮಾರಿಕಾಂಬಾ ಜಾತ್ರೆಯನ್ನು ಅತ್ಯಂತ ವಿಶೇಷವಾಗಿ ಆಚರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಶ್ರೀ ಮಾರಿಕಾಂಬಾ ದೇವಿ ದರ್ಶನ ಪಡೆದು ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದಿಂದ ಮಾರಿಕಾಂಬಾ ಕಲಾ ವೇದಿಕೆಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿ, ಶಾಸಕ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಜಾತ್ರೆ ಅಚ್ಚುಕಟ್ಟಾಗಿ ನಿರ್ವಹಣೆಯಾಗಿದೆ ಎಂದು ತಿಳಿಸಿದರು.
ಜಾತ್ರೆ ಎನ್ನುವುದು ಸಂಭ್ರಮದ ಸಂಕೇತ. ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ನೆರವೇರಿದೆ. ಜಾತ್ರೆಯಲ್ಲಿ ವಿವಿಧ ಆಟಿಕೆಗಳು ಜನರನ್ನು ಆಕರ್ಷಣೆ ಮಾಡಿದ್ದು, ಅಮ್ಮನ ದರ್ಶನಕ್ಕೆ ಪ್ರತಿ ದಿನ ಲಕ್ಷಾಂತರ ಜನರು ಬಂದಿದ್ದಾರೆ. ಈ ಬಾರಿ ಸಾಗರ ಜಾತ್ರೆಯಲ್ಲಿ ವಿಶೇಷವಾಗಿ ಹೆಲಿ ಟೂರಿಸಂಗೆ ಅವಕಾಶ ಕಲ್ಪಿಸಿದ್ದು ವಿಶೇಷ ಎಂದರು.
ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಶಾಸಕನಾಗಿ, ಸಮಿತಿ ಗೌರವಾಧ್ಯಕ್ಷನಾಗಿ ಜಾತ್ರೆಯನ್ನು ಅದ್ದೂರಿಯಾಗಿ ನಡೆಸಬೇಕು ಎನ್ನುವ ಅಭಿಲಾಷೆ ಈಡೇರಿದೆ. ಈ ಬಾರಿ ಹಿಂದಿನ ಎಲ್ಲ ವರ್ಷಗಳಿಗಿಂತ ದಾಖಲೆ ಪ್ರಮಾಣದಲ್ಲಿ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ ಎಂದು ಹೇಳಿದರು.
"

ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಪ್ರತಿ ದಿನ 20ಸಾವಿರಕ್ಕೂ ಹೆಚ್ಚು ಜನ ಪ್ರಸಾದ ಸ್ವೀಕರಿಸಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ, ಕುಸ್ತಿ ಪಂದ್ಯಾವಳಿ ಎಲ್ಲವೂ ಶಿಸ್ತುಬದ್ಧವಾಗಿ ನಡೆದಿದೆ. ಎಲ್ಲ ಸಮಿತಿ ಸದಸ್ಯರು ನಿರಂತರ ಕೆಲಸ ಮಾಡಿದ್ದಾರೆ. ಹೆಲಿಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ಎಲ್ಲವೂ ಪ್ರವಾಸೋದ್ಯಮ ದೃಷ್ಟಿಯಿಂದ ಪ್ರಮುಖವಾಗಿದೆ. ಗೋಪಾಲಕೃಷ್ಣ ಬೇಳೂರುಶಾಸಕ

ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಕೋಶಾಧ್ಯಕ್ಷ ನಾಗೇಂದ್ರ ಕುಮುಟಾ, ಉಪಾಧ್ಯಕ್ಷ ಸುಂದರ ಸಿಂಗ್, ಪ್ರಧಾನ ಕಾರ್ಯದರ್ಶಿ ಗಿರಿಧರ ರಾವ್, ಸಹ ಕಾರ್ಯದರ್ಶಿ ಎಸ್.ವಿ.ಕೃಷ್ಣಮೂರ್ತಿ, ಸಂಚಾಲಕ ವಿನಾಯಕ ಗುಡಿಗಾರ್, ಪುರುಷೋತ್ತಮ್, ಆರ್.ಚಂದ್ರು, ರವಿನಾಯ್ಡು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net