ಶಿಕಾರಿಪುರದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಉದ್ಘಾಟಿಸಿದರು. ಕೆ.ಎಸ್.ಹುಚ್ರಾಯಪ್ಪ, ನರಸಿಂಹಸ್ವಾಮಿ, ಬಿ.ಪಾಪಯ್ಯ ಇತರರಿದ್ದರು.
Published on:
Copied
Follow Us
ಶಿಕಾರಿಪುರ: ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಿಂದ ನೆಲದ ಭಾಷೆ, ಸಂಸ್ಕೃತಿಗಳ ಉಜ್ಜೀವನವಾಗುತ್ತದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಹೇಳಿದರು.
ಶ್ರೀಲಕ್ಷ್ಮೀವೆಂಕಟೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಉದ್ಘಾಟಿಸಿ
ಮಾತನಾಡಿ, ನಾವು ನಮ್ಮ ನೆಲ, ಜಲ, ಸಾಹಿತ್ಯ, ಸಂಸ್ಕೃತಿ ಪ್ರೀತಿಸಬೇಕು. ಜನಪದ ಸಂಸ್ಕೃತಿಯ ವಾರಸುದಾರರು ನಾವು ಎಂಬ ಹೆಮ್ಮೆ ನಮಗಿರಬೇಕು. ಸಾಹಿತ್ಯ ಮತ್ತು ಜಾನಪದ ಕ್ಷೇತ್ರವನ್ನು
ಶ್ರೀಮಂತಗೊಳಿಸಿದ ಕನ್ನಡ ಸಾರಸ್ವತ ಲೋಕದ ಹಿರಿಯ ಎಚ್.ಎಲ್.ನಾಗೇಗೌಡರ ಕಲ್ಪನೆ ಕೂಸು ಜನಪದ ಲೋಕ. ಇದರಲ್ಲಿ ಇಡೀ ಗ್ರಾಮೀಣ ಸಂಸ್ಕೃತಿಯ ಹೂರಣ ಅಡಗಿದೆ ಎಂದು ತಿಳಿಸಿದರು.
ಮಕ್ಕಳಲ್ಲಿ ಅಡಗಿರುವ ಕಥೆ, ಕವನ, ಹಾಡು, ಚಿತ್ರಕಲೆ, ಭಾಷಣ, ಪ್ರಬಂಧ ಚಟುವಟಿಕೆಗಳ ಪ್ರತಿಭೆಗೆ ಪ್ರೋತ್ಸಾಹ. ಉತ್ತೇಜನ ನೀಡುವ ಕೆಲಸವನ್ನು ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ
ಮೂಲಕ ಮಾಡಬೇಕು ಎಂದರು.
ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನಿಕಟಪೂರ್ವ ಅಧ್ಯಕ್ಷ ಕೆ.ಎಸ್.ಹುಚ್ರಾಯಪ್ಪ ಮಾತನಾಡಿ, ಸಾಹಿತ್ಯ ಮನಸ್ಸು ಎಲ್ಲರಲ್ಲಿರಬೇಕು. ಜನಪದದ ಜೀವಂತಿಕೆಯಿಂದ ಉನ್ನತ ಸಂಸ್ಕೃತಿ
ಹರಿಕಾರರಾಗಿದ್ದೇವೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೂತನ ತಾಲೂಕು ಅಧ್ಯಕ್ಷ ಎಸ್.ಎನ್.ನರಸಿಂಹಸ್ವಾಮಿ, ಕಸಾಪ ತಾಲೂಕು ಅಧ್ಯಕ್ಷ ಎಚ್.ಎಸ್.ರಘು, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ