ಹುಂಡಿ ತೆರೆಯುವುದರಿಂದ ಹಿಡಿದು, ಎಣಿಕೆ ಮಾಡಿ ಬ್ಯಾಂಕ್‌ಗೆ ಹಣ ಹಸ್ತಾಂತರಿಸುವವರೆಗಿನ ಸಂಪೂರ್ಣ ಪ್ರಕ್ರಿಯೆಯನ್ನು ದಿನಾಂಕ ಮತ್ತು ಸಮಯ ದಾಖಲಾಗುವಂತೆ ವೀಡಿಯೊ ಚಿತ್ರೀಕರಣ ಮಾಡುವುದು ಕಡ್ಡಾಯವಾಗಿರುತ್ತದೆ. ಹುಂಡಿ ಎಣಿಕೆಗೆ ಖಾಸಗಿ ಅಥವಾ ಸಾರ್ವಜನಿಕರ ಸೇವೆ ಪಡೆಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಕೇವಲ ಗೃಹರಕ್ಷಕ ದಳ, ಬ್ಯಾಂಕ್ ಸಿಬ್ಬಂದಿ ಹಾಗೂ ಸರ್ಕಾರಿ ನೌಕರರನ್ನು ಮಾತ್ರ ಬಳಸಿಕೊಳ್ಳಬೇಕು.