ಹುಲಿಕಲ್ ಘಾಟಿ ವೀಕ್ಷಿಸಿದ ಸಂಸದ ರಾಘವೇಂದ್ರ

 ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲಿಸಿದರು.
ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲಿಸಿದರು.
Published on
ಹೊಸನಗರ: ಹುಲಿಕಲ್ ಘಾಟಿ (ಬಾಳೆಬರೆ ಘಾಟಿ) ರಸ್ತೆಯ ತಾಲೂಕಿನ ಶ್ರೀ ಚಂಡಿಕಾಂಬಾ ದೇವಸ್ಥಾನದ ಬಳಿಯ ಹೇರ್‌ಪೀನ್ ತಿರುವಿನಲ್ಲಿ ಭೂಕುಸಿತಗೊಂಡು ಹೆದ್ದಾರಿ ಸಂಪೂರ್ಣ ಬಂದ್ ಆದ ಸ್ಥಳವನ್ನು ಸಂಸದ ಬಿ.ವೈ.ರಾಘವೇಂದ್ರ ಶುಕ್ರವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿಕಲ್ ಘಾಟಿ ರಸ್ತೆ ರಾಜ್ಯದ ಪ್ರಮುಖ ಹೆದ್ದಾರಿಯಾಗಿದೆ. ಈ ಹೆದ್ದಾರಿ ಕುಸಿದು ಒಂದೂವರೆ ತಿಂಗಳು ಕಳೆದಿವೆ. ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಣ ನೀಡಿದೆ. ಜು.10ರ ಒಳಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುತ್ತೇವೆ ಎಂದು ಇಂಜಿನಿಯರ್ ಹೇಳಿದ್ದಾರೆ. ಈ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಇದು ರಾಷ್ಟ್ರೀಯ ಹೆದ್ದಾರಿಯಾದರೆ ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ, ಪೆಟ್ರೋಲಿಯಂ ಉತ್ಪನ್ನಗಳ ಸಾಗಾಟ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಆಹಾರ ಪದಾರ್ಥಗಳ ಸಾಗಾಟಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಲೋಕೋಪಯೋಗಿ ಇಂಜಿನಿಯರ್ ಸುನೀಲ್ ಕುಮಾರ್, ಗುತ್ತಿಗೆದಾರ ಸಿ.ವಿ.ಚಂದ್ರಶೇಖರ್, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net