ಹಬ್ಬಗಳಿಗೆ ನಾಂದಿ ಹಾಡಿದ ನಾಗರಪಂಚಮಿ I nagara panchami pooje

ಶಿವಮೊಗ್ಗದ ಕೋಟೆ ಆಂಜನೇಯಸ್ವಾಮಿ ದೇಗುಲದ ಆವರಣದಲ್ಲಿರುವ ನಾಗರ ವಿಗ್ರಹಳಿಗೆ ಸಾರ್ವಜನಿಕರು ಪೂಜೆ ಸಲ್ಲಿಸಿದರು.
ಶಿವಮೊಗ್ಗದ ಕೋಟೆ ಆಂಜನೇಯಸ್ವಾಮಿ ದೇಗುಲದ ಆವರಣದಲ್ಲಿರುವ ನಾಗರ ವಿಗ್ರಹಳಿಗೆ ಸಾರ್ವಜನಿಕರು ಪೂಜೆ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಶಿವಮೊಗ್ಗ ಜಿಲ್ಲಾದ್ಯಂತ ಶ್ರದ್ಧಾಭಕ್ತಿಯಿಂದ ಹಬ್ಬದಾಚರಣೆ
  • ನಾಗರನಿಗೆ ತನಿ ಎರೆದ ಭಕ್ತರು
  • ಪ್ರಮುಖ ದೇವಾಲಯಗಳಲ್ಲಿ ಅಲಂಕಾರ
ಶಿವಮೊಗ್ಗ:

ಶ್ರಾವಣ (shravana) ಮಾಸದ ಮೊದಲ ಹಬ್ಬ ನಾಗರಪಂಚಮಿಯನ್ನು(nagara panchamni) ಸೋಮವಾರ ಜಿಲ್ಲಾದ್ಯಂತ ಸಡಗರ, ಸಂಭ್ರಮ, ಭಕ್ತಿ ಭಾವದಿಂದ ಆಚರಿಸಲಾಯಿತು. ವಿವಿಧ ನಾಗ ದೇವಾಲಯಗಳಲ್ಲಿ ವಿಶೇಷ ಪೂಜೆ (pooje) ಏರ್ಪಡಿಸಲಾಗಿತ್ತು. ಹಾಲಿನ ಅಭಿಷೇಕ, ವೇದಪಾರಾಯಣ, ಪವಮಾನ ಅಭಿಷೇಕ, ಆಶ್ಲೇಷ ಬಲಿ, ಕಾಳಸರ್ಪ ಶಾಂತಿ, ಮಹಾಮಂಗಳಾರತಿ ನೆರವೇರಿದವು.

ಜನರು ನಾಗರ ಕಲ್ಲಿಗೆ ವಿಶೇಷ ಪೂಜೆ ಸಲ್ಲಿಸಿದರು. ಹೊಸನಗರ ತಾಲೂಕು ನಾಗರಹಳ್ಳಿ ಕ್ಷೇತ್ರದಲ್ಲಿ ನೂರಾರು ಮಂದಿ ಪೂಜೆ ಸಲ್ಲಿಸಿದರು. ಶಿಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆಯ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಬಸವನಗುಡಿ, ಕೀರ್ತಿನಗರ ನಾಗರಕಟ್ಟೆ, ಸೀಗೆಹಟ್ಟಿ, ರವೀಂದ್ರನಗರ, ಗಾಂಧಿನಗರ, ವಿದ್ಯಾನಗರದ ಅರಳೀಕಟ್ಟೆ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಗಣಪತಿ ದೇವಸ್ಥಾನದ ಆವರಣದಲ್ಲಿದ್ದ ನಾಗರಕಲ್ಲಿಗೆ ಸಾರ್ವಜನಿಕರು ಹಣ್ಣು, ಕಾಯಿ ಅರ್ಪಿಸಿ, ಹಾಲಿನ ಅಭಿಷೇಕ ಮಾಡಿದರು.

ಕೆಲವೆಡೆ ಹುತ್ತದ ಮಣ್ಣಿನಿಂದ ಮಾಡಿದ ಮಣ್ಣಿನ ನಾಗರಕ್ಕೆ ಹಾಲೆರೆದರು. ಕೆಲ ಬಡಾವಣೆಗಳಲ್ಲಿ ಮಹಿಳೆಯರು ಭಕ್ತಿಯಿಂದ ಹುತ್ತಕ್ಕೆ ಹಾಲೆರೆದರು. ವಿವಿಧ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಶ್ರಾವಣ ಮಾಸದ ಪ್ರಥಮ ಹಬ್ಬ ಇದಾಗಿದ್ದು ನಾಗರಪಂಚಮಿಯೊಂದಿಗೆ ವಿವಿಧ ಹಬ್ಬಗಳಿಗೂ ಚಾಲನೆ ದೊರೆಯುತ್ತದೆ. ನಾಗಚೌತಿಯ ನಂತರ ಬರುವ ಪಂಚಮಿಯಂದು ಹಾಲೆರೆದರೆ ಒಳಿತಾಗುತ್ತದೆ ಎಂಬ ಭಾವನೆ ಜನರಲ್ಲಿದೆ. ನಾಗಾರಾಧನೆಗೆ ಹೆಚ್ಚು ಪ್ರಾಶಸ್ತ್ಯ ನೀಡುವುದರಿಂದ ನಾಗರಪಂಚಮಿ ಪ್ರಮುಖ ಹಬ್ಬವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net