ಆ.15ರೊಳಗೆ ಎಲ್ಲ ಗ್ರಾಪಂ, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕನಿಷ್ಠ 100 ಸದಸ್ಯರನ್ನೊಳಗೊಂಡ ಯುವ ಸಂಘಗಳನ್ನು ರಚನೆ ಮಾಡಲು ಸೂಚಿಸಿದರು. ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ(Youth Empowerment and Sports Department) ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಪೂರ್ಣ ಸಹಕಾರ ನೀಡಲಿವೆ ಎಂದರು.