

ಪ್ರಮುಖ ಮುಖ್ಯಾಂಶಗಳು
ದೇಶದ ಒಟ್ಟು ಅಡಕೆ ಉತ್ಪಾದನೆಯಲ್ಲಿ ಶೇ.79ರಷ್ಟು ರಾಜ್ಯದಲ್ಲೇ ಉತ್ಪಾದನೆಯಾಗುತ್ತಿದೆ. ಅಡಕೆಗೆ ರೋಗ ಬಂದಾಗ ಉಂಟಾಗುವ ನಷ್ಟದಿಂದ ಪಾರಾಗಲು ಮಿಶ್ರ ಬೆಳೆಗಳನ್ನು ಬೆಳೆಯಬೇಕು. ಇದಕ್ಕಾಗಿ ಅಡಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಸ್ತುತ ಅಡಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಅಡಕೆಯೊಂದಿಗೆ ಪೂರಕ ಬೆಳೆ ಬಗ್ಗೆಯೂ ಚಿಂತಿಸಬೇಕಿದೆ. ಯಾವುದೇ ರೀತಿಯ ಆರ್ಥಿಕ ನಷ್ಟವಾಗದಂತೆ ಮಿಶ್ರಬೆಳೆಗೆ ಒತ್ತು ನೀಡಬೇಕು. ರೈತರು ಹೊಸ ಬೆಳೆಗಳ ಬಗ್ಗೆ ತಿಳಿದುಕೊಳ್ಳಬೇಕು.