ತೀರ್ಥಹಳ್ಳಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಜನ್ಮದಿನ ಅಂಗವಾಗಿ ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಿಮ್ಮನೆ ಅಭಿಮಾನಿಗಳು ಪಟ್ಟಣದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಪೂಜೆ ಸಲ್ಲಿಸಿದರು. ಪಕ್ಷದ ತೀರ್ಥಹಳ್ಳಿ ಟಕದ ಅಧ್ಯಕ್ಷ ಕೆಸ್ತೂರು ಮಂಜುನಾಥ್ ಹಾಗೂ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಹಾಲಿಗೆ ನಾಗರಾಜ್ ಮಾತನಾಡಿದರು. ಪಕ್ಷದ ಮುಖಂಡರಾದ ಬಿ.ಕೆ.ವಾದಿರಾಜ್, ಅಮರನಾಥ ಶೆಟ್ಟಿ ಇತರರಿದ್ದರು.