ತೀರ್ಥಹಳ್ಳಿಯಲ್ಲಿ ಅಧಿಕಾರಿಗಳೇ ಮುಂದೆ ನಿಂತು ಅಕ್ರಮ ಮರಳು ದಂಧೆಗೆ ಕುಮ್ಮಕ್ಕು
ಶಿವಮೊಗ್ಗದಲ್ಲಿ ಶಾಸಕ ಆರಗ ಜ್ಞಾನೇಂದ್ರ ಆರೋಪ
ಶಿವಮೊಗ್ಗ: ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅಕ್ರಮ ದಂಧೆಯಲ್ಲಿ ಅಧಿಕಾರಿಗಳು ಶಾಮೀಲಾಗಿ ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ(Araga Gyanendra) ಆರೋಪಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ತೀರ್ಥಹಳ್ಳಿಯಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ(Illegal sand trade) ನಡೆಯುತ್ತಿದೆ. ನಾನೇ ಹೋಗಿ ಅಲ್ಲಿ ಪ್ರತಿಭಟನೆ ಮಾಡಿದ್ದೇನೆ. ಕೋಟ್ಯಂತರ ರೂ. ಮೌಲ್ಯದ ಅಕ್ರಮ ಮರಳು ಲೂಟಿ ಆಗಿದೆ. ಅದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ದೂರಿದರು.
ತೀರ್ಥಹಳ್ಳಿ(Thirthahalli)ಯ ಎಲ್ಲ ಇಲಾಖೆಯ ಅಧಿಕಾರಿಗಳೇ ಮುಂದೆ ನಿಂತು ಅಕ್ರಮ ಮರಳು ದಂಧೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಶಾಸಕರ ಹೋರಾಟದ ಬಳಿಕವೂ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಶಾಸಕನಾಗಿ ನಾನೇ ನೋಡುತ್ತ ಕೂರಬೇಕಾ ಎಂದು ಪ್ರಶ್ನಿಸಿದರು.
"
ರಾಜ್ಯದಲ್ಲಿ ಮತ್ತೆ ಅನಗತ್ಯವಾಗಿ ವಿದ್ಯಾರ್ಥಿಗಳಲ್ಲಿ ಭೇದಭಾವ ಮಾಡುತ್ತಿದ್ದಾರೆ. ಮತ್ತೆ ಶಾಲೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಲಾಗಿದೆ. ಹಿಜಾಬ್‌ಗೆ ಅವಕಾಶ ನೀಡಿ ಕೇಸರಿ ಶಾಲಿಗೆ ಅವಕಾಶ ನೀಡಿಲ್ಲ. ಇದು ವಿದ್ಯಾರ್ಥಿಗಳಲ್ಲಿ ಕೋಮುಭಾವನೆ ಕೆರಳುವಂತೆ ಮಾಡಿದೆ. ರಾಜ್ಯ ಸರ್ಕಾರ ದ್ವಂಧ್ವ ನೀತಿ ಅನುಸರಿಸುತ್ತಿದೆ.