ಹೊಳೆಹೊನ್ನೂರು ಸಮೀಪದ ಜಾವಳ್ಳಿ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಎಚ್‌ಎಸ್‌ಎನ್ ರಾವ್, ಶ್ರೀಕಾಂತ್ ಹೆಗಡೆ, ಡಾ. ರೆಜಿ ಜೋಸೆಫ್, ವಾಣಿ ಕೃಷ್ಣಪ್ರಸಾದ್ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಅವಕಾಶಗಳನ್ನು ಪ್ರತಿಯೊಬ್ಬರೂ ಸಮರ್ಪಕವಾಗಿ ಬಳಸಿಕೊಳ್ಳಿ
ಉತ್ತಮವಾಗಿ ಮೂಡಿಬರುತ್ತಿರುವ ಫಿಟ್ ಇಂಡಿಯಾ ಕಾರ್ಯಕ್ರಮ
ಹೊಳೆಹೊನ್ನೂರು: ಒಮ್ಮೆ ಸಿಗುವ ಅವಕಾಶಗಳನ್ನು ಪ್ರತಿಯೊಬ್ಬರೂ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅರಬಿಂದೋ ಫೌಂಡೇಷನ್ ಫಾರ್ ಎಜುಕೇಷನ್ ಶೈಕ್ಷಣಿಕ ನಿರ್ದೇಶಕ ಎಚ್‌ಎನ್‌ಎಸ್ ರಾವ್ ಹೇಳಿದರು.
ಸಮೀಪದ ಜಾವಳ್ಳಿ ಜ್ಞಾನದೀಪ ಸೀನಿಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕ ಕ್ರೀಡಾಕೂಟ ಸಮಾರಂಭ ಉದ್ಘಾಟಿಸಿ ಮಾತನಾಡಿ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಗಳಲ್ಲಿ ಸಾಧನೆ ಮಾಡಲು ಇರುವ ಅವಕಾಶಗಳನ್ನು ಮಕ್ಕಳು ಅರಿತುಕೊಳ್ಳಬೇಕು. ಇದಕ್ಕಾಗಿ ಪೂರಕ ಸಿದ್ಧತೆ ನಡೆಸಬೇಕು ಎಂದು ತಿಳಿಸಿದರು.
ಶಾಲಾ ಹಂತದ ಕ್ರೀಡಾಕೂಟಗಳಿಂದ ವಿದ್ಯಾರ್ಥಿಗಳಲ್ಲಿ ಉತ್ತಮ ಬಾಂಧವ್ಯ, ಧೈರ್ಯ ಮತ್ತು ವಿಶ್ವಾಸ ಬೆಳೆಯುತ್ತದೆ. ಕ್ರೀಡೆಗಳ ಮೂಲಕ ಅಭಿರುಚಿ ಇರುವ ಕ್ಷೇತ್ರ ಆಯ್ಕೆ ಮಾಡಿಕೊಂಡು ಸೂಕ್ತ ತರಬೇತಿ ಪಡೆದು ಸಾಧನೆ ಮಾಡಬೇಕು ಎಂದರು.
ಶಾಲೆ ಪ್ರಾಚಾರ್ಯ ಶ್ರೀಕಾಂತ್ ಎಂ. ಹೆಗಡೆ ಮಾತನಾಡಿ, ಕ್ರೀಡೆಗಳಿಂದ ಮಕ್ಕಳು ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಜ್ಞಾನದೀಪ ಶಾಲೆಯ 815 ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಸ್ಥಾನ ಪಡೆದಿದ್ದಾರೆ. ಜ್ಞಾನದೀಪ ಶಾಲೆಯಲ್ಲಿ ಫಿಟ್ ಇಂಡಿಯಾ ಕಾರ್ಯಕ್ರಮ ಉತ್ತಮವಾಗಿ ಮೂಡಿಬರುತ್ತಿದೆ ಎಂದು ತಿಳಿಸಿದರು.