ಎಲ್‌ಪಿಜಿ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಎಚ್.ಸಿ.ಯೋಗೇಶ್ ಮಾತನಾಡಿದರು. ಕೆ.ಚೇತನ್, ಚರಣ್, ಹರ್ಷಿತ್ ಗೌಡ, ಮಧು, ಚಿನ್ನಪ್ಪ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಸಾಮಾನ್ಯ ಜನರಿಗೆ ಹೊರೆ
ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ
ಶಿವಮೊಗ್ಗ: ಅಡುಗೆ ಅನಿಲ ಬೆಲೆ (price) ಏರಿಕೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ (congress) ಕಾರ್ಯಕರ್ತರು ಮಂಗಳವಾರ (tuesday) ನಗರದ ಗೋಪಿ ವೃತ್ತದಲ್ಲಿ ಸೌದೆ ಒಲೆ ಉರಿಸಿ ಟೀ ಕಾಯಿಸುವ ಮೂಲಕ ಪ್ರತಿಭಟಿಸಿದರು.
ಕೇಂದ್ರ ಸರ್ಕಾರ ಪದೆಪದೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಪ್ರಹಾರ ನಡೆಸುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ದಿನಗೂಲಿ ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೊರೆ ಹೆಚ್ಚಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 60 ರೂ. ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು 115 ರೂ. ಹೆಚ್ಚಿಸಿರುವುದು ಸಮರ್ಥನೀಯವಲ್ಲ. ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಉದ್ಯೋಗ ಸೃಷ್ಟಿ, ಜನಸಾಮಾನ್ಯರ ಜೀವನ ಸುಗಮಗೊಳಿಸುವ ಕೆಲಸ ಮಾಡುತ್ತಿಲ್ಲ. ಬದಲಿಗೆ ಮಿತಿಮೀರಿ ತೆರಿಗೆ ವಸೂಲು ಮಾಡುತ್ತಿದೆ ಎಂದು ದೂರಿದರು.
ರಾಷ್ಟ್ರಪತಿ ಮಧ್ಯಪ್ರವೇಶಿಸಿ ಕೇಂದ್ರ ಸರ್ಕಾರ ಬೆಲೆ ಏರಿಕೆಯ ನಿರ್ಧಾರ ಹಿಂಪಡೆಯುವಂತೆ ನಿರ್ದೇಶನ ನೀಡಬೇಕು. ಜನವಿರೋಧಿ ಕೇಂದ್ರ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಜವಳಿ ಮತ್ತು ಕೈಗಮಗ್ಗ ನಿಗಮದ ಅಧ್ಯಕ್ಷ ಕೆ.ಚೇತನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ನಗರಾಧ್ಯಕ್ಷ ಚರಣ್, ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೇಶ್, ಪ್ರಮುಖರಾದ ಮಧು, ಶಿವಕುಮಾರ್, ಚಿನ್ನಪ್ಪ, ವಿಜಯ್, ಸುವರ್ಣಾ ನಾಗರಾಜ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.