ಸೀಸದ ವಿಷ ಮಕ್ಕಳ ದೇಹ ಸೇರದಂತೆ ಪಾಲಕರು ಎಚ್ಚರವಹಿಸಲಿ I led poision

ಆಹಾರ ಮತ್ತು ಕುಡಿಯುವ ನೀರಿನಲ್ಲಿ ಸೀಸದ ಮಾಲಿನ್ಯ, ಮಕ್ಕಳಲ್ಲಿ ಸೀಸದ ವಿಷಬಾಧೆಯ ದುಷ್ಪರಿಣಾಮ ಕುರಿತು ಶಿಕ್ಷಕರಿಗಾಗಿ ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಏರ್ಪಡಿಸಿದ್ದ ಕಾರ್ಯಾಗಾರವನ್ನು ಡಾ. ತುಪ್ಪಿಲ್ ವೆಂಕಟೇಶ್ ಉದ್ಘಾಟಿಸಿದರು. ಭಾರತಿ, ಸೌಮ್ಯಾ, ಡಾ. ನಾಗರಾಜ ನಾಯ್ಕ, ಡಾ. ಶಶಿಧರ್, ಡಾ. ಹರ್ಷವರ್ಧನ್ ಇತರರಿದ್ದರು.
ಆಹಾರ ಮತ್ತು ಕುಡಿಯುವ ನೀರಿನಲ್ಲಿ ಸೀಸದ ಮಾಲಿನ್ಯ, ಮಕ್ಕಳಲ್ಲಿ ಸೀಸದ ವಿಷಬಾಧೆಯ ದುಷ್ಪರಿಣಾಮ ಕುರಿತು ಶಿಕ್ಷಕರಿಗಾಗಿ ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಏರ್ಪಡಿಸಿದ್ದ ಕಾರ್ಯಾಗಾರವನ್ನು ಡಾ. ತುಪ್ಪಿಲ್ ವೆಂಕಟೇಶ್ ಉದ್ಘಾಟಿಸಿದರು. ಭಾರತಿ, ಸೌಮ್ಯಾ, ಡಾ. ನಾಗರಾಜ ನಾಯ್ಕ, ಡಾ. ಶಶಿಧರ್, ಡಾ. ಹರ್ಷವರ್ಧನ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಾರ್ವಜನಿಕ ಆರೋಗ್ಯ ತಜ್ಞ ಡಾ. ತುಪ್ಪಿಲ್ ವೆಂಕಟೇಶ್ ಸಲಹೆ
  • ದುರ್ಗಿಗುಡಿ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ
ಶಿವಮೊಗ್ಗ: ಮಕ್ಕಳಲ್ಲಿ ಸೀಸದ(ಲೆಡ್) ಅಂಶ ಹೆಚ್ಚಾಗುವುದು ಅವರ ಮಿದುಳಿನ (brain) ವಿಕಾಸದ ಮೇಲೆ ಅತ್ಯಂತ ಗಂಭೀರ (serious) ಪರಿಣಾಮ ಬೀರುವುದರಿಂದ ಇದನ್ನು ಸೀಸ (led) ದ ವಿಷಬಾಧೆ ಎಂದೇ ಕರೆಯಲಾಗುತ್ತದೆ. ಇದನ್ನು ತಡೆಯಲು ಎಲ್ಲರೂ ಸಹಕರಿಸಬೇಕೆಂದು ಭಾರತದ ಲೆಡ್‌ಮ್ಯಾನ್ ಎಂದೇ ಪ್ರಸಿದ್ಧರಾಗಿರುವ ಖ್ಯಾತ ಪರಿಸರ ವಿಜ್ಞಾನಿ ಹಾಗೂ ಸಾರ್ವಜನಿಕ ಆರೋಗ್ಯ ತಜ್ಞ ಡಾ. ತುಪ್ಪಿಲ್ ವೆಂಕಟೇಶ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುಬ್ಬಯ್ಯ ಸಂಶೋಧನಾ ಸಂಸ್ಥೆ ಹಾಗೂ ಪೂರ್ವ ರೋಟರಿ ಕ್ಲಬ್ ಆಶ್ರಯದಲ್ಲಿ ಸೋಮವಾರ ನಗರದ ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಸೀಸದ ಮಾಲಿನ್ಯ, ಮಕ್ಕಳಲ್ಲಿ ಸೀಸದ ವಿಷಬಾಧೆಯ ದುಷ್ಪರಿಣಾಮ ಹಾಗೂ ತಡೆಗಟ್ಟುವ ಕ್ರಮಗಳ ಕುರಿತು ಶಿಕ್ಷಕರಿಗಾಗಿ ಏರ್ಪಡಿಸಿದ್ದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಮಿದುಳು ಬೆಳವಣಿಗೆಯ ಹಂತದಲ್ಲಿ ಇರುವುದರಿಂದ ಸೀಸದ ಅಂಶವು ಅವರ ನರಮಂಡಲದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಮಿದುಳಿನ ಜೀವಕೋಶಗಳಿಗೆ ಹಾನಿ ಮಾಡುತ್ತದೆ. ಸೀಸದ ಪ್ರಮಾಣ ಹೆಚ್ಚಾದಂತೆ ಮಗುವಿನ ಬುದ್ಧಿಮಟ್ಟ(ಐಕ್ಯೂ) ಕುಸಿಯುತ್ತದೆ. ಕಲಿತದ್ದು ನೆನಪಿಟ್ಟುಕೊಳ್ಳುವುದು ಕಷ್ಟವಾಗುತ್ತದೆ. ವರ್ತನೆಯಲ್ಲಿ ಬದಲಾವಣೆಯನ್ನೂ ಕಾಣಬಹುದು. ಈ ಬಗ್ಗೆ ಶಿಕ್ಷಕರು, ಪಾಲಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು.
ಬಣ್ಣಗಳು, ಆಟಿಕೆಗಳು, ಆಹಾರ, ತರಕಾರಿ, ಕಲುಷಿತ ನೀರು, ಪೆನ್ಸಿಲ್, ನ್ಯೂಸ್ ಪೇಪರ್ ಪೊಟ್ಟಣಗಳು, ಹೇರ್‌ಡೈ ಹೀಗೆ ವಿವಿಧ ಪದಾರ್ಥಗಳಲ್ಲಿ ಸೀಸವನ್ನು ಕಾಣಬಹುದು. ಇವುಗಳ ಬಳಕೆ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಅಗತ್ಯ. ಸೀಸ ಅಂಶ ಇರುವ ವಸ್ತುಗಳಿಂದ ದೂರವಿರಬೇಕು. ಮಗುವಿನ ಬೆಳವಣಿಗೆಯಲ್ಲಿ ಕುಂಠಿತ ಕಂಡುಬಂದರೆ ವೈದ್ಯರನ್ನು ಭೇಟಿಯಾಗಿ ರಕ್ತದಲ್ಲಿನ ಸೀಸದ ಪ್ರಮಾಣ ಪರೀಕ್ಷೆ ಮಾಡಿಸಬೇಕು ಎಂದರು.
ದುರ್ಗಿಗುಡಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ ಭಾರತಿ ಅಧ್ಯಕ್ಷತೆ ವಹಿಸಿದ್ದರು. ಡಿಎಸ್‌ಒ ಡಾ. ನಾಗರಾಜ್ ನಾಯ್ಕ, ಕೆಎಫ್‌ಡಿ ನೋಡಲ್ ಅಧಿಕಾರಿ ಡಾ. ಹರ್ಷವರ್ಧನ್, ಡಾ. ಶಶಿಧರ್, ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಬಾಲು, ರೋಟರಿ ಸಂಸ್ಥೆಯ ಕಾರ್ಯದರ್ಶಿ ಧನಂಜಯ ರಾಂಪುರ್, ವಿಜಯಕುಮಾರ್ ಇತರರಿದ್ದರು.
"

ಸೀಸವು ಮಿದುಳಿನ ಜೀವಕೋಶಗಳಿಗೆ ಹಾನಿ ಮಾಡುವುದರಿಂದ ಮಗುವಿನ ಜ್ಞಾಪಕ ಶಕ್ತಿ, ಗಮನ, ಐಕ್ಯೂ ಮೇಲೆ ಪರಿಣಾಮ ಬೀರಿ ಕಲಿಕಾ ನ್ಯೂನತೆ ಮತ್ತು ಇತರೆ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ಬಗ್ಗೆ ಪಾಲಕರು, ಶಿಕ್ಷಕರು ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕಿದೆ. ಸೀಸ ದೇಹ ಪ್ರವೇಶಿಸುವುದನ್ನು ತಡೆಯಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು.

— ಸೌಮ್ಯಾ ದಲ್ಲಾಸ್‌ನ ವೈದ್ಯಕೀಯ ವಿದ್ಯಾರ್ಥಿನಿ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net