ಕೆಲಸ ಕೊಡಲಾಗದಿದ್ದರೆ ಪಿಂಚಣಿ ವಿತರಣೆ | Village planning

ಶಿವಮೊಗ್ಗ ತಾಲೂಕು ಹೊಳಲೂರಿನಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ ಸಂಸದ ಬಿ.ವೈ.ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು. ಡಾ. ಧನಂಜಯ ಸರ್ಜಿ, ಜಗದೀಶ್, ಸಂತೋಷ್, ಶ್ರೀನಿವಾಸ್ ಇತರರಿದ್ದರು.
ಶಿವಮೊಗ್ಗ ತಾಲೂಕು ಹೊಳಲೂರಿನಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ ಸಂಸದ ಬಿ.ವೈ.ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು. ಡಾ. ಧನಂಜಯ ಸರ್ಜಿ, ಜಗದೀಶ್, ಸಂತೋಷ್, ಶ್ರೀನಿವಾಸ್ ಇತರರಿದ್ದರು.
Published on
ಹೊಳೆಹೊನ್ನೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹೆಸರನ್ನು ಬದಲಾಯಿಸಿ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ ರಾಮ್ ಜಿ) ಎಂದು ನಾಮಕರಣ ಮಾಡಿ ಮಸೂದೆ ಅಂಗೀಕರಿಸಲಾಗಿದೆ. ಇದರಿಂದ ಬಡವರ ಹಾಗೂ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ ತಾಲೂಕಿನ ಹೊಳಲೂರಿನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯಡಿ 45 ಲಕ್ಷ ರೂ. ಅನುದಾನದಡಿ ಹೊಸ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
 ಕೇಂದ್ರ ಮತ್ತು ರಾಜ್ಯ ಸರ್ಕಾರದ 459 ಕಾರ್ಯಕ್ರಮಗಳಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ನೆಹರು ಅವರ ಹೆಸರುಗಳೇ ಇವೆ. ಆಗ ಕಾಂಗ್ರೆಸ್‌ಗೆ ಗಾಂಧೀಜಿ ಹೆಸರು ನೆನಪಿಗೆ ಬಂದಿರಲಿಲ್ಲ. 100 ದಿನ ಇದ್ದ ಕೆಲಸದ ದಿನಗಳನ್ನು ಈಗ 125 ದಿನಗಳಿಗೆ ಹೆಚ್ಚಿಸಲಾಗಿದೆ. ಬಡವರಿಗೆ ಸರ್ಕಾರದಿಂದ ಕೆಲಸ ಕೊಡುವುದಕ್ಕೆ ಆಗದಿದ್ದಲ್ಲಿ ಪಿಂಚಣಿ ವಿತರಿಸಲಾಗುವುದು ಎಂದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಹೊಳಲೂರು ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು. ಹೊಳಲೂರು ಭಾಗದಲ್ಲಿ ವಲಯ ಮಟ್ಟದ ಕ್ರೀಡಾಕೂಟಗಳ ಆಯೋಜನೆಗಳಿಗೂ ಜಿಲ್ಲಾ ಕೇಂದ್ರಕ್ಕೆ ಹೋಗಬೇಕಾದ ಅನಿವಾರ್ಯತೆ ಇತ್ತು. ಸುಸಜ್ಜಿತ ಕ್ರೀಡಾಂಗಣ ಸಿದ್ಧವಾಗುತ್ತಿರುವುದು ಸ್ಥಳೀಯ ಯುವಕರಲ್ಲಿ ಆಶಾಭಾವನೆ ಮೂಡಿಸಿದೆ ಎಂದು ಹೇಳಿದರು.
ಎಂಎಲ್‌ಸಿ ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಪ್ರಮುಖರಾದ ಶ್ರೀನಿವಾಸ್, ಮಲ್ಲೇಶಪ್ಪ, ದೇವರಾಜ್, ಸುರೇಶ್, ಮಧು ಗೌಡ, ಶಕೀಲ್, ಹೊಳ್ಳೂರಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net