ರಾಹುಲ್ ಗಾಂಧಿ ಮೇಲೆ ವಿಶ್ವಾಸ ಕಳೆದುಕೊಂಡ ಜನ; ಯಡಿಯೂರಪ್ಪ |Yediyurappa

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Published on
ಶಿವಮೊಗ್ಗ: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ(Rahul gandi) ಮೇಲೆ ದೇಶದ ಜನರು ನಂಬಿಕೆ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಬಿಹಾರ ಚುನಾವಣೆ ಫಲಿತಾಂಶವೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(Yediyurappa) ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ(bihar)ದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂಬುದು ಎಲ್ಲರ ನಿರೀಕ್ಷೆ ಆಗಿತ್ತು. ಆದರೆ ನಿರೀಕ್ಷೆಗೂ ಮೀರಿ ಎನ್‌ಡಿಎ ಸ್ಥಾನಗಳನ್ನು ಗೆದ್ದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ನೇತೃತ್ವ ಮತ್ತು ಮುಖ್ಯಮಂತ್ರಿ ನಿತಿಶ್‌ಕುಮಾರ್ ಆಡಳಿತವನ್ನು ಮೆಚ್ಚಿ ಜನರು ಮತ ಹಾಕಿದ್ದಾರೆ. ಅದಕ್ಕಾಗಿ ಬಿಹಾರದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಬಿಹಾರದಲ್ಲಿ ದಯನೀಯ ಸೋಲು ಅನುಭವಿಸಿದ್ದರಿಂದ ಕಾಂಗ್ರೆಸ್ ಅನ್ನು ಅಲ್ಲಿನ ಜನತೆ ಒಪ್ಪಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಬಿಜೆಪಿಗೆ ದೊಡ್ಡ ಹುಮ್ಮಸ್ಸು ತಂದಿದ್ದು, ಮುಂಬರುವ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಗೆಲುವಿಗೆ ಈ ಫಲಿತಾಂಶ ಶಕ್ತಿ ತುಂಬಲಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net