ಪ್ರತಿಭಾ ಕಾರಂಜಿಯಿಂದ ವ್ಯಕ್ತಿತ್ವ ನಿರ್ಮಾಣ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆರೆಹಳ್ಳಿ, ಹುಂಚ ಹೋಬಳಿಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷೆ  ಧನಲಕ್ಷ್ಮೀ ಉದ್ಘಾಟಿಸಿದರು. ಚಂದ್ರಪ್ಪ, ರತ್ನಾಕರ ಇತರರಿದ್ದರು.
ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆರೆಹಳ್ಳಿ, ಹುಂಚ ಹೋಬಳಿಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮೀ ಉದ್ಘಾಟಿಸಿದರು. ಚಂದ್ರಪ್ಪ, ರತ್ನಾಕರ ಇತರರಿದ್ದರು.
Published on
ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ಎಂದು ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮೀ ಹೇಳಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕೆರೆಹಳ್ಳಿ, ಹುಂಚ ಹೋಬಳಿಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು.
ಕಲೆ, ಸಾಹಿತ್ಯ, ಸಾಂಸ್ಕೃತಿಕ, ಸೃಜನಾತ್ಮಕ ಚಟುವಟಿಕೆಗಳು ಮಕ್ಕಳ ಮನಸ್ಸಿನಲ್ಲಿ ಸುಪ್ತವಾಗಿರುತ್ತವೆ. ಅವುಗಳು ಅಭಿವ್ಯಕ್ತ ಆಗಬೇಕಾದರೆ ಸೂಕ್ತ ಮಾರ್ಗದರ್ಶನ, ವೇದಿಕೆಗಳು ಅಗತ್ಯ. ಇದನ್ನು ಮನಗಂಡ ಸರ್ಕಾರ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಮಕ್ಕಳ ಪ್ರತಿಭೆಗೆ ಚ್ಯುತಿಬಾರದಂತೆ ಪಾಲಕರು, ಶಿಕ್ಷಕರು ಗಮನಹರಿಸಬೇಕು. ಗೆಲುವನ್ನು ನಿದರ್ಶನವಾಗಿ, ಸೋಲನ್ನು ಸವಾಲಾಗಿ ಸ್ವೀಕರಿಸುವ ಗುಣವನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಪ್ಪ, ಉಪಪಾಚಾರ್ಯ ರತ್ನಾಕರ, ಅಕ್ಷರ ದಾಸೋಹ ಅಧಿಕಾರಿ ಶೇಷಾಚಲ, ಸೋಮಶೇಖರ, ಕರಿಬಸಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net