ಪಾಠದ ಜತೆಗೆ ಆಟವೂ ಮುಖ್ಯ | taluk level sports

ಸೊರಬದಲ್ಲಿ ಆಯೋಜಿಸಿದ್ದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದ ಉದ್ಘಾಟನೆ ಕಾರ್ಯಕ್ರಮದಲ್ಲಿ ಚಂದ್ರಪ್ಪ ಎಸ್. ಗುಂಡಪಲ್ಲಿ, ಜಯಶೀಲ ಗೌಡ, ಎಸ್.ಮಂಜುನಾಥ್, ಪುಷ್ಪಾ ಇತರರಿದ್ದರು.
ಸೊರಬದಲ್ಲಿ ಆಯೋಜಿಸಿದ್ದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದ ಉದ್ಘಾಟನೆ ಕಾರ್ಯಕ್ರಮದಲ್ಲಿ ಚಂದ್ರಪ್ಪ ಎಸ್. ಗುಂಡಪಲ್ಲಿ, ಜಯಶೀಲ ಗೌಡ, ಎಸ್.ಮಂಜುನಾಥ್, ಪುಷ್ಪಾ ಇತರರಿದ್ದರು.
Published on
ಸೊರಬ: ವಿದ್ಯಾರ್ಥಿಗಳ ಜೀವನದಲ್ಲಿ ಕ್ರೀಡೆ ಎಂಬುದು ಶಿಕ್ಷಣದ ಒಂದು ಭಾಗ. ಪಾಠಗಳು ಎಷ್ಟು ಮುಖ್ಯವೋ ಕ್ರೀಡೆಗಳು ಅಷ್ಟೇ ಮುಖ್ಯ ಎಂದು ಡಿಡಿಪಿಯು ಚಂದ್ರಪ್ಪ ಎಸ್. ಗುಂಡಪಲ್ಲಿ ಹೇಳಿದರು.
ಪಟ್ಟಣದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದ ಉದ್ಘಾಟನೆ ನೇರವೇರಿಸಿ ಮಾತನಾಡಿದ ಅವರು. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧಿಸಬಹುದು. ಅಲ್ಲದೆ ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ನಾಗರಾಜ್ ಜೈನ್ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಅದನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯ ಎಂದರು.
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಜಯಶೀಲ ಗೌಡ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬೇಕು. ತಾಲೂಕಿಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
ತಾಲೂಕು ನೌಕರರ ಸಂಘದ ಅಧ್ಯಕ್ಷ ಎಸ್.ಮಂಜುನಾಥ್ ಮಾತನಾಡಿ, ಕ್ರೀಡೆಯನ್ನು ಹಬ್ಬದಂತೆ ಆಚರಿಸಿ ಎಂದರು. ಪ್ರಾಚಾರ್ಯ ಡಿ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಡಾ. ಉಮೇಶ್ ಭದ್ರಾಪುರ ಪ್ರತಿಜ್ಞಾ ವಿಧಿ ಬೋಧಿಸಿದರು. ನಿವೃತ್ತ ಪ್ರಾಚಾರ್ಯ ಸುರೇಶಪ್ಪ, ಸುಬ್ರಹ್ಮಣ್ಯ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ವಿರೇಶ್, ವಿಜೇಂದ್ರಕುಮಾರ್, ಪುಷ್ಪಾ, ಶಾರದಾ, ಉಪನ್ಯಾಸಕ ಸಂಘದ ಅಧ್ಯಕ್ಷ ರಾಜಶೇಖರ್, ನೌಕರರ ಸಂಘದ ನಿರ್ದೇಶಕ ಬಸವರಾಜ್, ಉಪನ್ಯಾಸಕರಾದ ರವಿ, ಮಂಜುನಾಥ್, ಪ್ರಜ್ವಲ್, ಅನಿಲ್, ನೀಲಕಂಠಪ್ಪ, ಹಾಲಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net