ಪಿಯು ಕಾಲೇಜಿನ ಪ್ರಾಚಾರ್ಯರ ವಿರುದ್ಧ ಪೋಕ್ಸೋ ಪ್ರಕರಣ | minors Harassment

ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.
ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • 17 ವರ್ಷದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ
  • ಕಾಲೇಜಿನ ಎದುರು ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ
  • ಸೊಂಟಕ್ಕೆ ಕೈ ಹಾಕುವುದು ಸೇರಿ ಅನುಚಿತವಾಗಿ ವರ್ತನೆ
ಶಿವಮೊಗ್ಗ: ಅಪ್ರಾಪ್ತೆಗೆ ಕಿರುಕುಳ(minors 

Harassment) ನೀಡಿದ ಆರೋಪದ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಕಾಲೇಜಿನ ಪ್ರಾಚಾರ್ಯರ ವಿರುದ್ಧ ಪೋಕ್ಸೋ ಮತ್ತು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ಬೆನ್ನಲ್ಲೇ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.

ಪಿಯು ಕಾಲೇಜಿನ ಪ್ರಾಚಾರ್ಯ(Principal of PU College) ಅದೇ ಕಾಲೇಜಿನ 17 ವರ್ಷದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಜು.18ರಂದು ಕುಟುಂಬದ ಸಂಬಂಧಿಯೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಹಾಕಿದ್ದಳು. ಜು.20ರಂದು ಕೂಡ ಕಾಲೇಜಿಗೆ ಗೈರಾಗಿದ್ದು, ಜು.21ರಂದು ಕಾಲೇಜಿಗೆ ತೆರಳಿದ್ದಳು. ಈ ವೇಳೆ ಪ್ರಾಚಾರ್ಯ ಆಕೆಯೊಂದಿಗೆ ಹಾಗೂ ಇತರ ಕೆಲವು ವಿದ್ಯಾರ್ಥಿನಿಯರೊಂದಿಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ್ದರು.
ತರಗತಿಯಲ್ಲಿ ಎಲ್ಲ ವಿದ್ಯಾರ್ಥಿಗಳ ಮುಂದೆ ಮುಜುಗರ ಉಂಟಾಗುವ ರೀತಿಯಲ್ಲಿ ವೈಯಕ್ತಿಕ ವಿಚಾರಗಳ ಕುರಿತು ಮಾತನಾಡಿದ್ದಲ್ಲದೆ, ಕಾಲೇಜಿನ ಕಾರು ಪಾರ್ಕಿಂಗ್ ಪ್ರದೇಶದಲ್ಲಿ ಕೈಕುಲುಕುವುದು, ಹೆಗಲ ಮೇಲೆ ಕೈ ಹಾಕುವುದು ಹಾಗೂ ಸೊಂಟಕ್ಕೆ ಕೈ ಹಾಕುವುದು ಸೇರಿ ಅನುಚಿತವಾಗಿ ವರ್ತಿಸುತ್ತಿದ್ದರು ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಪ್ರಾಚಾರ್ಯರ ವರ್ತನೆ ಪ್ರಥಮ ಪಿಯುಸಿಯಿಂದಲೂ ಮುಂದುವರಿದಿತ್ತು ಎನ್ನಲಾಗಿದ್ದು, ಇದೀಗ ವಿದ್ಯಾರ್ಥಿನಿ ದೂರಿನ ಮೇರೆಗೆ ಕೋಟೆ ಪೊಲೀಸ್ ಠಾಣೆ(Kote Police Station)ಯಲ್ಲಿ ಪ್ರಕರಣ ದಾಖಲಾಗಿದೆ.
ಎಬಿವಿಪಿ ಪ್ರತಿಭಟನೆ: ಎಫ್‌ಐಆರ್(FIR) ದಾಖಲಾದ ಬೆನ್ನಲ್ಲೇ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಎದುರು ಗುರುವಾರ ಪ್ರತಿಭಟನೆ ನಡೆಸಿ ಪ್ರಾಚಾರ್ಯರನ್ನು ತಕ್ಷಣ ಅಮಾನತುಗೊಳಿಸುವಂತೆ ಆಗ್ರಹಿಸಿದರು. ಕಾಲೇಜಿನ ಒಳಗೆ ನುಗ್ಗಿದ ಪ್ರತಿಭಟನಾಕಾರರು, ತರಗತಿಗೆ ತೆರಳಿ ವಿದ್ಯಾರ್ಥಿನಿಯನ್ನು ಮಾತನಾಡಿಸಲು ಯತ್ನಿಸಿದರು. ಈ ವೇಳೆ ಸಿಬ್ಬಂದಿ ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಲೇಜಿನ ಗೇಟ್ ಮತ್ತು ಪ್ರವೇಶ ದ್ವಾರವನ್ನು ಬಂದ್ ಮಾಡಲಾಗಿತ್ತು. ಬಳಿಕ ಕಾಲೇಜಿನ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದರು. ಎಬಿವಿಪಿ ರಾಜ್ಯ ಕಾರ್ಯದರ್ಶಿ ಗೋಪಿ ರಂಗನಾಥ್, ಆಕಾಶ್, ರವಿ, ವಿನಯ್, ನಿರಂಜನ್, ಪನ್ನಗ, ಮದನ್, ನಂದನ್, ಧೀರಾಜ್ ಪ್ರತಿಭಟನೆಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net