ಪೀಠದತ್ತ ಆಸಕ್ತಿ ತೋರದ ರಾಜಕೀಯ ಪಕ್ಷಗಳು I political parties

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ವಕೀಲರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಗುರುವಾರ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಹಿರಿಯ ವಕೀಲ ಬಸಪ್ಪ ಗೌಡ, ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಸ್ವಾಮಿ ಮುಂತಾದವರು ಭಾಗವಹಿಸಿದ್ದರು.
ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ವಕೀಲರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಗುರುವಾರ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಹಿರಿಯ ವಕೀಲ ಬಸಪ್ಪ ಗೌಡ, ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಸ್ವಾಮಿ ಮುಂತಾದವರು ಭಾಗವಹಿಸಿದ್ದರು.
Published on
ಶಿವಮೊಗ್ಗ: ಕಳೆದ ಕೆಲ ದಿನಗಳಿಂದ ಹೈಕೋರ್ಟ್ (highcourt) ಸಂಚಾರಿ ಪೀಠ ಸ್ಥಾಪನೆ ಸಂಬಂಧ ಶಿವಮೊಗ್ಗದಲ್ಲಿ ನಿರಂತರ ಹೋರಾಟಗಳು ನಡೆಯುತ್ತಿವೆ. ಆರಂಭದಲ್ಲಿ ಶಿವಮೊಗ್ಗದಲ್ಲೇ ಪೀಠ ಸ್ಥಾಪನೆ ಆಗಬೇಕೆಂಬ ಒತ್ತಾಯ ಕೇಳಿಬಂತು. ಕ್ರಮೇಣ ಮಂಗಳೂರಿ (mangalore) ನಲ್ಲಿ ಪೀಠ ಸ್ಥಾಪನೆಯಾದರೆ ಅದಕ್ಕೆ ಶಿವಮೊಗ್ಗ (shivamogga) ಜಿಲ್ಲೆಯನ್ನು ಸೇರಿಸಬಾರದು ಎಂಬ ಆಗ್ರಹ ಕೇಳಿಬರುತ್ತಿದೆ. ಇನ್ನೊಂದೆಡೆ ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ನಿದ್ರೆಗೆ ಜಾರಿವೆ.
ಹೈಕೋರ್ಟ್ ಸಂಚಾರಿ ಪೀಠಕ್ಕೆ ಸಂಬಂಧಿಸಿ ವಕೀಲರು ನಡೆಸುತ್ತಿರುವ ಹೋರಾಟಕ್ಕೆ ಅನೇಕ ಸಂಘ ಸಂಸ್ಥೆಗಳ ಪ್ರಮುಖರು ದನಿಗೂಡಿಸಿದ್ದಾರೆ. ಆದರೆ ರಾಜಕೀಯವಾಗಿ ಮಾತ್ರ ಒಕ್ಕೊರಲ ದನಿ ಕೇಳಿಬರುತ್ತಿಲ್ಲ. ಪ್ರಮುಖ ಮೂರು ರಾಜಕೀಯ ಪಕ್ಷಗಳು ತಮಗೂ ಈ ಹೋರಾಟಕ್ಕೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿವೆ.
ಮಂಗಳೂರಿನಲ್ಲಿ ಕಂಡುಬಂದ ಪಕ್ಷಾತೀತ ಪ್ರಯತ್ನ ಶಿವಮೊಗ್ಗದಲ್ಲಿ ಕಾಣದಂತಾಗಿದೆ. ಈವರೆಗೆ ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸ್ಥಳಕ್ಕೆ ತೆರಳಿ ವಕೀಲರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಐದು ದಿನದಿಂದ ವಕೀಲರ ಭವನದ ಸಮೀಪ ನಡೆಯುತ್ತಿರುವ ಮುಷ್ಕರದಲ್ಲಿ ರಾಜಕೀಯ ಪಕ್ಷಗಳ ದೊಡ್ಡ ಗುಂಪು ಕಾಣಿಸಿಕೊಂಡಿಲ್ಲ.
ಇನ್ನೊಂದೆಡೆ ಜನಪ್ರತಿನಿಧಿಗಳು ಕೂಡ ಪಕ್ಷಾತೀತವಾಗಿ ವಕೀಲರ ಹೋರಾಟಕ್ಕೆ ಸಾಥ್ ನೀಡುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಮರ್ಪಣೆ ಮಾಡಿದ್ದಷ್ಟೇ ಈವರೆಗಿನ ಮೈಲಿಗಲ್ಲು. ಸರ್ಕಾರದಿಂದ ಇನ್ನೂ ಯಾವುದೇ ಸ್ಪಷ್ಟ ಭರವಸೆ ಸಿಕ್ಕಿಲ್ಲ.
ವಕೀಲರು ನಡೆಸುತ್ತಿರುವ ಈ ಹೋರಾಟದಲ್ಲಿ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಸಂಪೂರ್ಣ ಕೈ ಜೋಡಿಸದೇ ಇದ್ದರೆ ಸರ್ಕಾರದ ಮೇಲೆ ಒತ್ತಡ ಹೇರುವುದಾಗಲಿ, ಆ ಮೂಲಕ ಹೈಕೋರ್ಟ್ ಗಮನಸೆಳೆಯುವುದಾಗಲಿ ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಸ್ಪಂದನೆ ಅತ್ಯವಶ್ಯ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net