ಮೂರು ವರ್ಷಗಳಿಂದ ರಸ್ತೆ ಗುಂಡಿ ಮುಚ್ಚುವ ಕೆಲಸವೂ ಆಗಿಲ್ಲ B.Y.Vijayendra

ಶಿವಮೊಗ್ಗ: ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕೆಲಸವೂ ಸಮರ್ಪಕವಾಗಿ ನಡೆದಿಲ್ಲ. ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
B.Y.Vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.
Published on: 

ಶಿವಮೊಗ್ಗ: ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕೆಲಸವೂ ಸಮರ್ಪಕವಾಗಿ ನಡೆದಿಲ್ಲ. ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಕೇವಲ ಜಾಹೀರಾತುಗಳ ಮೂಲಕ ’ನುಡಿದಂತೆ ನಡೆದಿದ್ದೇವೆ’ ಎಂದು ಹೇಳಿಕೊಳ್ಳುತ್ತಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ತೀವ್ರವಾಗಿ ಟೀಕಿಸಿದರು.

ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಪರಿಹಾರ ನೀಡುವ ಯೋಗ್ಯತೆ ಇಲ್ಲದ ರಾಜ್ಯ ಸರ್ಕಾರ ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ ಕ್ಯಾಬಿನೆಟ್ ದರ್ಜೆ ಕಲ್ಪಿಸುವುದರಲ್ಲಿ ನಿರತವಾಗಿದೆ. ಬರಗಾಲದ ಸಂದರ್ಭದಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡುವ ಅನಿವಾರ್ಯತೆ ಮುಖ್ಯಮಂತ್ರಿಗಳಿಗೆ ಏನಿತ್ತು ಎಂದು ಪ್ರಶ್ನಿಸಿದರು.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಇದರ ಜತೆಗೆ ಭಾರತ್ ಜೋಡೋ ಸಂಯೋಜಕರನ್ನೂ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರವೇ ಆರ್ಥಿಕ ಸಂಕಷ್ಟದಲ್ಲಿದೆ ಎಂದು ಹೇಳಿಕೊಳ್ಳುತ್ತಿರುವಾಗ ಇಂತಹ ನೇಮಕಾತಿಗಳಿಗೆ ಹಣ ವ್ಯಯಿಸುವ ಅಗತ್ಯವೇನಿತ್ತು? ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಕ್ಯಾಬಿನೆಟ್ಛ್ಛಿ ದರ್ಜೆ ನೀಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರಗಳನ್ನು ತೆರೆಯುವ ಕೆಲಸ ಮಾಡಲಾಗುತ್ತಿದೆ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದೆ. ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಆದರೆ ಅನಗತ್ಯ ನೇಮಕಾತಿ ಮತ್ತು ಘೋಷಣೆಗಳಿಗೆ ಸರ್ಕಾರ ಮುಂದಾಗಿದೆ ಎಂದು ಟೀಕಿಸಿದರು.