ಚಂದ್ರಗುತ್ತಿಯಲ್ಲಿ ಮಹಿಳೆಯರಿಗೆ ಪ್ರಸಾದ

ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಮಹಿಳೆಯರಿಗೆ ಉಡಿ ತುಂಬಲಾಯಿತು.
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಮಹಿಳೆಯರಿಗೆ ಉಡಿ ತುಂಬಲಾಯಿತು.
Published on
ಸೊರಬ: ಐತಿಹಾಸಿಕ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ಹಬ್ಬ ಪ್ರಯುಕ್ತ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ನೆರವೇರಿದವು.
ವರಮಹಾಲಕ್ಷ್ಮೀ ವ್ರತದ ಅಂಗವಾಗಿ ಧಾರ್ಮಿಕ ದತ್ತಿ ಇಲಾಖೆ ಆದೇಶದಂತೆ ದೇವಸ್ಥಾನಕ್ಕೆ ಆಗಮಿಸಿದ ಮಹಿಳೆಯರಿಗೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಅವರು ಅರಿಶಿಣ, ಕುಂಕುಮ, ಹಸಿರು ಬಳೆ ಹಾಗೂ ಸೀರೆ ನೀಡಿ ಉಡಿತುಂಬಿದರು. ಸಿಬ್ಬಂದಿಯೊಂದಿಗೆ ಮಹಿಳೆಯರಿಗೆ ಪ್ರಸಾದ ವಿತರಿಸಿದರು.
ಶ್ರಾವಣ ಮಾಸದ ಶುಕ್ರವಾರ ಹಿನ್ನೆಲೆಯಲ್ಲಿ ಶ್ರೀ ರೇಣುಕಾಂಬ ದೇವಿ ದರ್ಶನ ಪಡೆಯಲು ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು. ದೇವಸ್ಥಾನದ ಪರಿವಾರ ದೇವರಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ ಹಾಗೂ ತ್ರಿಶೂಲ ಬೈರಪ್ಪ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಚಂದ್ರಗುತ್ತಿ ಗ್ರಾಮದಲ್ಲಿ ಜನರು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮನೆಗಳಲ್ಲಿ ದೇವಿ ಬೆಳ್ಳಿ ಮುಖವಾಡ ಪ್ರತಿಷ್ಠಾಪಿಸಿ ಹೂವುಗಳಿಂದ ವಿಶೇಷವಾಗಿ ಅಲಂಕರಿಸಿದ್ದರು. ವಿವಿಧ ಖಾದ್ಯಗಳನ್ನು ತಯಾರಿಸಿ ನೈವೇದ್ಯ ಅರ್ಪಿಸಿ ಹಬ್ಬ ಆಚರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net