ಶಿವಮೊಗ್ಗದ 24 ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ shivamogga exam

ಶಿವಮೊಗ್ಗ: ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ನ. 15ರಂದು 24ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಸುಗಮ ಹಾಗೂ ಪಾರದರ್ಶಕ ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಳಿ ತಿಳಿಸಿದರು.
shivamogga exam
ಪರೀಕ್ಷಾ ಕೇಂದ್ರದೊಳಗೆ ಅಳವಡಿಸಿರುವ ಸಿಸಿ ಟಿವಿ ದೃಶ್ಯಾವಳಿಗಳನ್ನು ಪ್ರಕಾಶ ಜಿ.ಟಿ.ನಿಟ್ಟಳಿ, ಬಿ.ನಿಖಿಲ್, ವಿ.ಅಭಿಷೇಕ್, ರಿಷಿ ಆನಂದ್ ವೀಕ್ಷಿಸುತ್ತಿರುವುದು.
Published on: 

ಶಿವಮೊಗ್ಗ: ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ನ. 15ರಂದು 24ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಸುಗಮ ಹಾಗೂ ಪಾರದರ್ಶಕ ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಳಿ ತಿಳಿಸಿದರು.

ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾರದರ್ಶಕ ಮತ್ತು ಭದ್ರತೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚುನಾವಣಾ ಕಾರ್ಯದ ಮಾದರಿಯಲ್ಲಿ ಅತ್ಯಂತ ಕಾಳಜಿ ವಹಿಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

8,466 ಮಂದಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 156 ಮಂದಿ ಅಂಗವಿಕಲರು, ಇಬ್ಬರು ತೃತೀಯ ಲಿಂಗಿಗಳಿದ್ದಾರೆ. ಕೆಲವು ಪರೀಕ್ಷಾ ಕೇಂದ್ರಗಳನ್ನು ಮಹಿಳೆಯರಿಗಾಗಿ ಮೀಸಲಿರಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೊಠಡಿಯಲ್ಲಿಯೂ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳ ದೃಶ್ಯಾವಳಿಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದಲೇ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ. ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ನೇರ ಮೇಲ್ವಿಚಾರಣೆಗೆ ವಿಶೇಷ ಗಮನಹರಿಸಲಾಗಿದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ ಸೇರಿ ವಿದ್ಯುನ್ಮಾನ ವಾಹಕಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗರಿಷ್ಠ 24 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಇರಲಿದೆ. ಪ್ರತಿ ಕೊಠಡಿಗೆ ಇಬ್ಬರು ಮೇಲ್ವಿಚಾರಕರು, ಓರ್ವ ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್ ಇರಲಿದ್ದಾರೆ. ಪ್ರತಿ ಕೇಂದ್ರಕ್ಕೆ ಓರ್ವ ವಸ್ತ್ರಸಂಹಿತೆ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಪ್ರಕಾಶ ಜಿ.ಟಿ.ನಿಟ್ಟಳಿ ತಿಳಿಸಿದರು.

ಪರೀಕ್ಷೆ ದಿನದಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಆ ಸಂದರ್ಭದಲ್ಲಿ ಕಂಪ್ಯೂಟರ್ ಕೇಂದ್ರಗಳು, ಜೆರಾಕ್ಸ್ ಸೆಂಟರ್ ತೆರೆಯುವಂತಿಲ್ಲ. ಪ್ರತಿ ಕೇಂದ್ರಕ್ಕೆ ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ನಿಯೋಜಿಸಲಾಗಿದೆ. ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡದಂತೆ ಮೆಸ್ಕಾಂಗೆ ಸೂಚಿಸಲಾಗಿದೆ ಎಂದರು.

ಎಸ್ಪಿ ಬಿ.ನಿಖಿಲ್, ಜಿಪಂ ಸಿಇಒ ರಿಷಿ ಆನಂದ್, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ ಸುದ್ದಿಗೋಷ್ಠಿಯಲ್ಲಿದ್ದರು.