ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ I quality education

 ಮಧು ಬಂಗಾರಪ್ಪ ಜನ್ಮದಿನದ ಅಂಗವಾಗಿ ಶಿವಮೊಗ್ಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಮಧು ಬಂಗಾರಪ್ಪ, ಆರ್.ಪ್ರಸನ್ನಕುಮಾರ್, ಬಲ್ಕಿಷ್ ಬಾನು, ಎಂ.ಶ್ರೀಕಾಂತ್, ವಿಜಯಕುಮಾರ್, ಜಿ.ಡಿ.ಮಂಜುನಾಥ್ ಇತರರಿದ್ದರು.
ಮಧು ಬಂಗಾರಪ್ಪ ಜನ್ಮದಿನದ ಅಂಗವಾಗಿ ಶಿವಮೊಗ್ಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಮಧು ಬಂಗಾರಪ್ಪ, ಆರ್.ಪ್ರಸನ್ನಕುಮಾರ್, ಬಲ್ಕಿಷ್ ಬಾನು, ಎಂ.ಶ್ರೀಕಾಂತ್, ವಿಜಯಕುಮಾರ್, ಜಿ.ಡಿ.ಮಂಜುನಾಥ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಮಧು ಬಂಗಾರಪ್ಪ ಭರವಸೆ
  • ಅಭಿಮಾನಿ ಬಳಗದಿಂದ ಜನ್ಮದಿನಾಚರಣೆ
ಶಿವಮೊಗ್ಗ: ಸತತ ಪರಿಶ್ರಮದಿಂದ ಜಿಲ್ಲೆಯ ನೈರ್ಮಲ್ಯ ಕಾಪಾಡುವ ಪೌರ ಕಾರ್ಮಿಕರನ್ನು ಗೌರವಿಸುವುದು ನನ್ನ ಭಾಗ್ಯ. ಸೊರಬ (soraba) ದ ಪೌರ ಕಾರ್ಮಿಕರಿಗೆ ವಿಮಾನ (aeroplane) ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದೇನೆ. ಮುಂದಿನ ಅಧಿವೇಶನದ ಒಳಗೆ ಶಿವಮೊಗ್ಗ ಪಾಲಿಕೆಯ ಎಲ್ಲ 400 ಪೌರ ಕಾರ್ಮಿಕರಿಗೂ ಹಂತ ಹಂತವಾಗಿ ಬೆಂಗಳೂರಿಗೆ ವಿಮಾನ ಪ್ರಯಾಣ (travel) ಭಾಗ್ಯ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು (madhu) ಬಂಗಾರಪ್ಪ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಮಧು ಬಂಗಾರಪ್ಪ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ಆಶೀರ್ವದಿಸಿದ ಸಾಮಾನ್ಯ ಜನರ ಋಣ ತೀರಿಸಲಾಗುವುದಿಲ್ಲ. ನನಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡು ಮಕ್ಕಳನ್ನು ದೇವರ ಸಮಾನವಾಗಿ ನೋಡುತ್ತ, ಗುಣಮಟ್ಟದ ಶಿಕ್ಷಣ ದೊರೆಯುವಂತೆ ಶ್ರಮಿಸುತ್ತಿದ್ದೇನೆ ಎಂದರು.
ಮಕ್ಕಳಿಗೆ ಶಿಕ್ಷಣ ಸಿಕ್ಕಾಗ ಸ್ವಾಭಾವಿಕವಾಗಿಯೇ ಸಮಾನತೆ ಮೂಡುತ್ತದೆ. ಇದು ನನ್ನ ಜೀವನದಲ್ಲಿನ ಪುಣ್ಯದ ಕೆಲಸ ಎಂದು ಭಾವಿಸಿದ್ದೇನೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಇದೇ ರೀತಿ ಮುಂದುವರಿಯಲಿ. ಬೇರೆಯವರ ಹಾಗೆ ರೈಲು ಬಿಡುವ ಕೆಲಸ ನಾನು ಮಾಡುವುದಿಲ್ಲ. ಕೊಟ್ಟ ಭರವಸೆಯನ್ನು ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.
ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು, ಮಧು ಬಂಗಾರಪ್ಪ ಅವರನ್ನು ಸನ್ಮಾನಿಸಿ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಪೌರ ಕಾರ್ಮಿಕರಿಗೆ ಉಡುಗೊರೆ ನೀಡಿ ಮಧು ಬಂಗಾರಪ್ಪ ಸನ್ಮಾನಿಸಿದರು. ಸಭಾ ಕಾರ್ಯಕ್ರಮದ ಬಳಿಕ 60 ವಿದ್ಯಾರ್ಥಿಗಳೊಂದಿಗೆ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ನಿರ್ದೇಶಕ ಎಂ.ಶ್ರೀಕಾಂತ್, ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೇಶ್, ಪ್ರಮುಖರಾದ ರಮೇಶ್ ಶಂಕರಘಟ್ಟ, ಜಿ.ಡಿ.ಮಂಜುನಾಥ್, ಎನ್.ರಮೇಶ್, ರವಿಕುಮಾರ್, ವಿಜಯಕುಮಾರ್ (ಧನಿ) ಇತರರಿದ್ದರು.
"

ಮಧು ಬಂಗಾರಪ್ಪ ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ದಿನದಂದೇ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ನಿಶ್ಚಯಿಸಿದ್ದರು. ಇಲಾಖೆಯಲ್ಲಿ ಅನೇಕ ಸುಧಾರಣೆ ತಂದಿದ್ದಾರೆ. ಅವರು ಮುಂದೆ ರಾಜ್ಯದ ಉಪಮುಖ್ಯಮಂತ್ರಿ ಆಗಲಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net