ಅಭಿವೃದ್ಧಿಯೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ

ಸಾಗರ ನಗರಸಭೆ ರಂಗಮಂದಿರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಲಹಾ ಸಭೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು, ಎಚ್.ಕೆ.ನಾಗಪ್ಪ,  ನಾಗಪ್ಪ, ಬಿ.ಆರ್.ಜಯಂತ್, ಇಂದೂಧರ ಬೇಸೂರು ಇತರರಿದ್ದರು.
ಸಾಗರ ನಗರಸಭೆ ರಂಗಮಂದಿರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಲಹಾ ಸಭೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು, ಎಚ್.ಕೆ.ನಾಗಪ್ಪ, ನಾಗಪ್ಪ, ಬಿ.ಆರ್.ಜಯಂತ್, ಇಂದೂಧರ ಬೇಸೂರು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • 4.80 ಕೋಟಿ ರೂ. ವೆಚ್ಚದಲ್ಲಿ ಕಲ್ಚರಲ್ ಕಾಂಪ್ಲೆಕ್ಸ್
  • ಶಾಸಕ ಗೋಪಾಲಕೃಷ್ಣ ಬೇಳೂರು ಮಾಹಿತಿ
ಸಾಗರ: ಅಭಿವೃದ್ಧಿ ಜತೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಮುಖ್ಯ ಆಶಯ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ನಗರಸಭೆಯಿಂದ 4.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಟ್ಯಾಗೋರ್ ಕಲ್ಚರಲ್ ಕಾಂಪ್ಲೆಕ್ಸ್ ಮತ್ತು 2.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿರುವ ಉದ್ಯಾನ ಕಾಮಗಾರಿ ಕುರಿತು ನಗರಸಭೆ ರಂಗಮಂದಿರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಲಹೆ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಕಲೆ, ಸಾಹಿತ್ಯ, ಸಾಂಸ್ಕೃತಿಕ, ರಂಗಭೂಮಿ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.
ಮೈಸೂರು ನಂತರ ಸಾಗರ ರಾಜ್ಯದಲ್ಲಿ ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತ ನಗರಗಳಲ್ಲಿ ಒಂದಾಗಿದೆ. ಅನೇಕ ವರ್ಷದಿಂದ ಸಾಗರಕ್ಕೆ ಸುಸಜ್ಜಿತ ಒಳಾಂಗಣ ರಂಗಮಂದಿರ ಬೇಕು ಎನ್ನುವ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಗಣಪತಿ ಕೆರೆ ಸಮೀಪ ಶಾಶ್ವತ ಧ್ವಜಸ್ತಂಭದ ಹಿಂಭಾಗದಲ್ಲಿ ರಂಗಮಂದಿರ ನಿರ್ಮಿಸಲು ಅಗತ್ಯ ಸಿದ್ಧತೆ ನಡೆದಿದೆ ಎಂದರು.
"

ದಿನದ 24 ಗಂಟೆ ನಗರದ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಬೇಕು ಎನ್ನುವ ಉದ್ದೇಶದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, 6 ತಿಂಗಳಲ್ಲಿ ಹಣ ಬಿಡುಗಡೆಯಾಗಲಿದೆ. ಒಳಚರಂಡಿ ಕಾಮಗಾರಿಗೆ ಹೆಚ್ಚುವರಿಯಾಗಿ 35 ಕೋಟಿ ರೂ. ಮಂಜೂರು ಮಾಡಿಸಲಾಗಿದೆ. ಗೋಪಾಲಕೃಷ್ಣ ಬೇಳೂರುಶಾಸಕ


4.80 ಕೋಟಿ ರೂ. ಹಣ ಇದ್ದು, ಇನ್ನುಳಿದ 5.20 ಕೋಟಿ ರೂ.ಗಳನ್ನು ವಿವಿಧ ಮೂಲಗಳಿಂದ ಸಂಗ್ರಹಿಸಿ ರಂಗಮಂದಿರ ನಿರ್ಮಿಸಲಾಗುತ್ತದೆ. ಶಾಶ್ವತ ಧ್ವಜಸ್ತಂಭದ ಎದುರು ರಸ್ತೆ ಪಕ್ಕದಲ್ಲಿ 2.40 ಕೋಟಿ ರೂ. ವೆಚ್ಚದಲ್ಲಿ ಸುಂದರ ಉದ್ಯಾನವನ ನಿರ್ಮಿಸಲಾಗುತ್ತಿದೆ. ಗಣಪತಿ ಕೆರೆ ಪಕ್ಕದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಚಾನೆಲ್ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.
ಪೌರಾಯುಕ್ತ ಎಚ್.ಕೆ.ನಾಗಪ್ಪ ಮಾತನಾಡಿ, ಟ್ಯಾಗೋರ್ ಕಲ್ಚರಲ್ ಕಾಂಪ್ಲೆಕ್ಸ್ 900 ಆಸನ ವ್ಯವಸ್ಥೆಯುಳ್ಳ ರಂಗಮಂದಿರ ಆಗಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ ರಂಗಮಂದಿರ ನಿರ್ಮಾಣವಾಗಲಿದೆ ಎಂದರು.
ಬಿ.ಟಾಕಪ್ಪ, ಬಿ.ಆರ್.ಜಯಂತ್, ವಿ.ಟಿ.ಸ್ವಾಮಿ, ವಿಜಯವಾಮನ್, ಸಿ.ಟಿ.ಬ್ರಹ್ಮಾಚಾರ್, ಅ.ರಾ.ಲಂಬೋಧರ್, ಎಂ.ನಾಗರಾಜ್, ಕೆ.ವಿ.ಜಯರಾಮ್, ಟಿ.ವಿ.ಪಾಂಡುರಂಗ, ವಸುಧಾ ಶರ್ಮ, ಎಂ.ವಿ.ಪ್ರತಿಭಾ, ಇಂದೂಧರ ಬೇಸೂರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net