ಸೊರಬ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ

ಸೊರಬ ಪಟ್ಟಣದಲ್ಲಿ 1 ಕೋಟಿ ರೂ. ವೆಚ್ಚದ ರಸ್ತೆ ಡಾಂಬರೀಕರಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಗಣಪತಿ ಹುಲ್ತಿಕೊಪ್ಪ, ಪ್ರಶಾಂತ್ ಮೇಸ್ತ್ರಿ, ಜಯಶೀಲಗೌಡ, ಅಣ್ಣಪ್ಪ, ಅತಿಕ್ ಇತರರಿದ್ದರು.
ಸೊರಬ ಪಟ್ಟಣದಲ್ಲಿ 1 ಕೋಟಿ ರೂ. ವೆಚ್ಚದ ರಸ್ತೆ ಡಾಂಬರೀಕರಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಗಣಪತಿ ಹುಲ್ತಿಕೊಪ್ಪ, ಪ್ರಶಾಂತ್ ಮೇಸ್ತ್ರಿ, ಜಯಶೀಲಗೌಡ, ಅಣ್ಣಪ್ಪ, ಅತಿಕ್ ಇತರರಿದ್ದರು.
Published on
ಸೊರಬ: ತಾಲೂಕಿನಲ್ಲಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ನೀರಾವರಿ ಯೋಜನೆ ಸೇರಿದಂತೆ ಮೂಲ ಸೌಕರ್ಯ ಒದಗಿಸುವಲ್ಲಿ ಸಚಿವ ಮಧು ಬಂಗಾರಪ್ಪ ಅವರು ಹೆಚ್ಚಿನ ಅನುದಾನ ತರುತ್ತಿದ್ದಾರೆ ಎಂದು ತಾಪಂ ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ ಹೇಳಿದರು.
ಪಟ್ಟಣದ ಅಂಬೇಡ್ಕರ್ ಬಡಾವಣೆ ಹಾಗೂ ರಾಘವೇಂದ್ರ ಬಡಾವಣೆಗೆ ಕೊಳಚೆ ನಿರ್ಮೂಲನಾ ಮಂಡಳಿ ಯೋಜನೆಯಡಿ 1 ಕೋಟಿ ರೂ. ವೆಚ್ಚದ ರಸ್ತೆ ಡಾಂಬರೀಕರಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಅವಶ್ಯಕತೆ ಇರುವ ಕಾಮಗಾರಿಗಳ ಪಟ್ಟಿ ಮಾಡಿ ಸಂಬಂಧಿಸಿದ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಪುರಸಭೆ ವ್ಯಾಪ್ತಿಯಲ್ಲಿ ಎಲ್ಲ ವಾರ್ಡ್‌ಗಳಿಗೂ ರಸ್ತೆ, ಕುಡಿಯುವ ನೀರು ಹಾಗೂ ಚರಂಡಿ ದುರಸ್ತಿಗೆ ಆದ್ಯತೆ ನೀಡಲಾಗುವುದು. ಅಧಿಕಾರಿಗಳು ಸ್ಥಳೀಯ ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಬೇಕು ಎಂದರು.
ಆಶ್ರಯ ಸಮಿತಿ ತಾಲೂಕು ಅಧ್ಯಕ್ಷ ಪ್ರಶಾಂತ್ ಮೇಸ್ತ್ರಿ, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಂ.ಡಿ.ಶೇಖರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಅತಿಕ್  ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net