ಶಿಕಾರಿಪುರ: ದೇಹದ ಪ್ರಮುಖ ಅಂಗ ಕಣ್ಣು. ಕಣ್ಣಿನ ರಣೆಗೆ ಆದ್ಯತೆ ನೀಡುವುದು ಎಲ್ಲರ ಜವಾಬ್ದಾರಿ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ಪಟ್ಟಣದ ಮಂಗಳ ಭವನದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯ, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ನೇತೃತ್ವದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ನಮ್ಮ ಆರೋಗ್ಯದ ಬಗ್ಗೆ ಗಮನ ಕೊಡಬೇಕು. ಆರೋಗ್ಯಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಮತ್ತೊಂದಿಲ್ಲ ಎಂದರು.
ಪ್ರಸ್ತುತ ನಮ್ಮ ಆರೋಗ್ಯವನ್ನೇ ನಾವು ಉಪೇಸುತ್ತಿದ್ದೇವೆ. ಜಗತ್ತಿನ ಸೌಂದರ್ಯ ಸವಿಯಲು ಕಣ್ಣು ಅತಿ ಮುಖ್ಯ. ಮಾನವನ ದೇಹದಲ್ಲಿ ಮಿದುಳಿನ ನಂತರ ಕಣ್ಣು ಅತಿ ಸೂ$್ಮಅಂಗ. ಕಣ್ಣಿನ ಆರೈಕೆಗೆ ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು. ಕಣ್ಣಿನ ಶಸ್ತ್ರಚಿಕಿತ್ಸೆ ನಂತರ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಕೃಷ್ಣಪ್ರಸಾದ್ ಕೂಡ್ಲ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಭಿವೃದ್ಧಿ ಕಾರ್ಯಗಳು ಕೇವಲ ಒಂದು ೇತ್ರಕ್ಕೆ ಸೀಮಿತವಾಗದೆ ರಾಜ್ಯಾದ್ಯಂತ ಇವೆ. ಶಿಕಾರಿಪುರ ೇತ್ರವು ರಾಜ್ಯವೇ ಹೆಮ್ಮೆ ಪಡುವಂತೆ ಪ್ರಗತಿ ಹೊಂದಿದೆ ಎಂದರು.
ಶಿಕಾರಿಪುರದಲ್ಲಿ ಒಂದು ಶಿಬಿರ ಮಾಡುವ ಕನಸು ಇಂದು ಸಾಕಾರವಾಗಿದೆ. ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಈ ರೀತಿಯ ಶಿಬಿರ ಆಯೋಜಿಸಿ ಅಂಧಮುಕ್ತ ರಾಜ್ಯವನ್ನಾಗಿಸಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಶಿಬಿರದಲ್ಲಿ ಕಣ್ಣಿಗೆ ಸಂಬಂಧಿಸಿದ ಎಲ್ಲ ರೀತಿಯ ತಪಾಸಣೆ ನಡೆಸಿ ಸೂಕ್ತ ಮಾರ್ಗದರ್ಶನದೊಂದಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು.
ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯ ಗುರುಮೂರ್ತಿ, ಮುಖಂಡರಾದ ವಸಂತಗೌಡ, ಚನ್ನವಿರಪ್ಪ, ಹುಲ್ಮಾರ್ ಮಹೇಶ್, ಸಂದೀಪ, ಪಾಲಾಪ್ಪ, ಈರಣ್ಣ ಗೌಡ ಮುಂತಾದವರಿದ್ದರು.
ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದ ಅನುದಾನ ಸಿಗುತ್ತಿಲ್ಲ. ಸರ್ಕಾರ ಅನುದಾನ ನೀಡಬೇಕು. ನಮ್ಮ ಕುಟುಂಬದಿಂದ ಆರೋಗ್ಯ ತಪಾಸಣೆ ಶಿಬಿರ, ಉದ್ಯೋಗ ಮೇಳ ಆಯೋಜಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಉತ್ತಮ ಸರ್ಕಾರ ಬರುತ್ತದೆ. ಆಗ ಅಭಿವೃದ್ಧಿ ಕಾರ್ಯಗಳು ಆಗುತ್ತವೆ. ಅಲ್ಲಿಯವರೆಗೆ ಜನರು ಕಾಯಬೇಕು.