ಪ್ರಸ್ತಾವಿತ ಅಣು ವಿದ್ಯುತ್ ಸ್ಥಾವರ ಯೋಜನೆ ರದ್ದು | Nuclear power plant

ಶಿವಮೊಗ್ಗದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್, ಮುಖಂಡರಾದ ಎಂ.ಶ್ರೀಕಾಂತ್, ರಮೇಶ್ ಶಂಕರಘಟ್ಟ, ಶಿ.ಜು.ಪಾಷಾ ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್, ಮುಖಂಡರಾದ ಎಂ.ಶ್ರೀಕಾಂತ್, ರಮೇಶ್ ಶಂಕರಘಟ್ಟ, ಶಿ.ಜು.ಪಾಷಾ ಸುದ್ದಿಗೋಷ್ಠಿಯಲ್ಲಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬೇಸೂರು ಸೇರಿ ರಾಜ್ಯದ ಯಾವುದೇ ಭಾಗದಲ್ಲೂ ಅನುಷ್ಠಾನವಿಲ್ಲ
  • ಯೋಜನೆ ರದ್ದತಿಯಿಂದ ರೈತರಲ್ಲಿನ ಆತಂಕ ದೂರ
  • ಶಿವಮೊಗ್ಗದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿಕೆ
ಶಿವಮೊಗ್ಗ: ಸಾಗರ ತಾಲೂಕಿನ ಬೇಸೂರು ಗ್ರಾಮ(Besur Village)ದಲ್ಲಿ ಪ್ರಸ್ತಾವಿತ ಅಣು ವಿದ್ಯುತ್ ಸ್ಥಾವರ(Nuclear Power Plant) ಯೋಜನೆಯನ್ನು ರಾಜ್ಯ ಸರ್ಕಾರ ಸಂಪೂರ್ಣ ಕೈಬಿಟ್ಟಿದ್ದು, ರಾಜ್ಯದ ಯಾವುದೇ ಭಾಗದಲ್ಲೂ ಯೋಜನೆ ಅನುಷ್ಠಾನ ಮಾಡುವುದಿಲ್ಲವೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಅಣುವಿದ್ಯುತ್ ಸ್ಥಾವರ ಯೋಜನೆಯಿಂದ ರೈತರಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಹಿಂದಿನ ಸಿಎಂ ಸಿದ್ದರಾಮಯ್ಯ(Former CM Siddaramaiah) ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್(Chief Secretary to the Government Shalini Rajneesh) ಅವರು ಯೋಜನೆ ಕೈಬಿಟ್ಟಿರುವುದಾಗಿ ಕೇಂದ್ರ ಸರ್ಕಾರಕ್ಕೆ ಸ್ಪಷ್ಟಪಡಿಸಿದ್ದಾರೆ. ಯೋಜನೆ ರದ್ದತಿಯಿಂದ ರೈತರ ಆತಂಕ ದೂರವಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ(Electricity privatization)ದ ಆತಂಕ ಮನೆ ಮಾಡಿತ್ತು. ಸ್ವತಃ ಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್ ಅವರೇ ವಿದ್ಯುತ್ ಖಾಸಗೀಕರಣಕ್ಕೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ. ಆದರೆ ಕೇಂದ್ರ ಸರ್ಕಾರ ಅಣು ವಿದ್ಯುತ್ ಸ್ಥಾವರ ಮತ್ತು ವಿದ್ಯುತ್ ಖಾಸಗೀಕರಣಕ್ಕೆ ರಾಜ್ಯದ ಮೇಲೆ ಒತ್ತಡ ಹಾಕುತ್ತಿದೆ ಎಂದು ದೂರಿದರು.

ಜನಪ್ರತಿನಿಧಿಗಳ ಜತೆ ಸಿಎಂ ಸಭೆ

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರ ಪೀಠ(High Court Traffic Bench) ಸ್ಥಾಪನೆ ಮಾಡಬೇಕು ಎಂಬುದು ನಮ್ಮೆಲ್ಲರ ಅಪೇಕ್ಷೆ. ವಕೀಲರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಜಿಲ್ಲೆಯ ಜನಪ್ರತಿನಿಧಿಗಳು(Representatives) ಸಿಎಂ ಭೇಟಿ ಮಾಡಿದ್ದೇವೆ. ಇನ್ನೊಮ್ಮೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಕರಾವಳಿ ಹೈಕೋರ್ಟ್ ಪೀಠಕ್ಕೆ ಶಿವಮೊಗ್ಗ ಜಿಲ್ಲೆ ಸೇರ್ಪಡೆ ಬೇಡವೆಂದು ಒತ್ತಡ ಹಾಕುತ್ತೇವೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್, ಮುಖಂಡರಾದ ಎಂ.ಶ್ರೀಕಾಂತ್, ರಮೇಶ್ ಶಂಕರಘಟ್ಟ, ಶಿ.ಜು.ಪಾಷಾ ಸುದ್ದಿಗೋಷ್ಠಿಯಲ್ಲಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net