27ಕ್ಕೆ ಡಿಸಿ ಕಚೇರಿ ಎದುರು ಪ್ರತಿಭಟನೆ | Meeting

ಇಂದೂಧರ ಗೌಡ
ಇಂದೂಧರ ಗೌಡ
Published on
ಸಾಗರ: ತಾಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ನಿರ್ಮಾಣ ಯೋಜನೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮೇ 27ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜನಪರ ಹೋರಾಟ ವೇದಿಕೆ ಅಧ್ಯಕ್ಷ ಬೇಸೂರು ಇಂದೂಧರ ಗೌಡ ಹೇಳಿದರು.
ಬೇಸೂರಿನಲ್ಲಿ ಮಂಗಳವಾರ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆ ಪ್ರಸ್ತಾಪ ಹಿಂಪಡೆಯುವವರೆಗೂ ನಮ್ಮ ಹೋರಾಟಕ್ಕೆ ವಿರಾಮ ಕೊಡುವ ಪ್ರಶ್ನೆಯೇ ಇಲ್ಲ. ಈಗಾಗಲೆ ಯೋಜನೆ ಕೈಬಿಡಿ ಎಂದು ಶಾಸಕರ ಮೂಲಕ ಗ್ರಾಮ ಸಭೆಗಳಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೂ ಮನವಿ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳಿಸಬೇಕು ಎಂದರು.
ಯೋಜನೆ ಕೈಬಿಡಲೇಬೇಕು ಎಂದು ಒತ್ತಾಯಿಸಲು ಏಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖರು ಸಭೆ ಸೇರಿ ನಿರ್ಣಯ ಕೈಗೊಂಡಿದ್ದೇವೆ. ಈ ಬಗ್ಗೆ ನಿರ್ಲಕ್ಷೃ ತೋರಿದರೆ ಅಪಾಯ ನಿಶ್ಚಿತ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುವ ಹೋರಾಟದಲ್ಲಿ ಕನಿಷ್ಠ 10 ಸಾವಿರ ಜನರು ಪಾಲ್ಗೊಳ್ಳಬೇಕು. ನಮ್ಮ ಹಕ್ಕೊತ್ತಾಯ ಮಂಡಿಸಲು ಸಿಗುವ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
ತೀ.ನ.ಶ್ರೀನಿವಾಸ್, ಕುರುವರಿ ಸೀತಾರಾಮ್, ಕೆ.ವಿ.ನವೀನ್, ನಾಗೇಂದ್ರ ಸಾಗರ್, ಕುಂಟುಗೋಡು ಸೀತಾರಾಮ್, ಅರುಣ್ ಪಾಟೀಲ್, ಕೆ.ಜಿ.ಪ್ರಶಾಂತ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net