23ರಿಂದ ಪಿಯು ಕಾಲೇಜು ಸುವರ್ಣ ಮಹೋತ್ಸವ | Golden Jubilee Celebration

ಗೋಪಾಲಕೃಷ್ಣ ಬೇಳೂರು
ಗೋಪಾಲಕೃಷ್ಣ ಬೇಳೂರು
Published on
ಸಾಗರ: ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಡಿ.23 ಮತ್ತು 24ರಂದು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ನಾನು ಸಹ ರಾಜ್ಯದ ಅತ್ಯಂತ ಪ್ರತಿಷ್ಠಿತ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಆಗುತ್ತದೆ. ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಕಾಲೇಜಿಗೆ ಸುಣ್ಣ-ಬಣ್ಣ ಸೇರಿ ವಿವಿಧ ಮೂಲ ಸೌಲಭ್ಯ ಒದಗಿಸಲು 50 ಲಕ್ಷ ರೂ. ನೀಡಲಾಗಿದೆ. 23ರಂದು ಹಳೆಯ ವಿದ್ಯಾರ್ಥಿಗಳ ಸಮಾಗಮ, ಉದ್ಘಾಟನೆ ಮತ್ತಿತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 24ರಂದು ಸ್ಮರಣ ಸಂಚಿಕೆ ಬಿಡುಗಡೆ, ಸಮಾರೋಪ ಸಮಾರಂಭ ಹಾಗೂ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾಲೇಜಿನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಅಭ್ಯಾಸ ಮಾಡಿದ್ದು ದೊಡ್ಡದೊಡ್ಡ ಹುದ್ದೆಯಲ್ಲಿದ್ದಾರೆ. ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಎಲ್ಲರನ್ನೂ ಆಹ್ವಾನಿಸುತ್ತಿದ್ದೇವೆ. ಕಾಲೇಜಿನಲ್ಲಿ ಶಿಕ್ಷಣ ಪಡೆದು ಸಾಧನೆ ಮಾಡಿದವರಿಗೆ, ಹಿಂದಿನ ಉಪನ್ಯಾಸಕರಿಗೆ ಸೇರಿ ಹಲವರಿಗೆ ಸನ್ಮಾನ ಮಾಡಲಾಗುತ್ತಿದೆ. ಕಾಲೇಜಿಗೆ 95 ಲಕ್ಷ ರೂ. ವೆಚ್ಚದಲ್ಲಿ 5 ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದೂಧರ ಬೇಸೂರು, ಸದಸ್ಯರಾದ ಸಲೀಂ, ಉಮೇಶ್, ಭವ್ಯಾ, ಬಸವರಾಜ್, ಲೋಕೇಶ್, ಪ್ರಾಚಾರ್ಯ ಸತ್ಯನಾರಾಯಣ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net